ಶನಿವಾರ, ಜನವರಿ 23, 2021
18 °C

ಏಕರೂಪ ಪ್ರಯಾಣ ದರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜಹಂಸ, ಐರಾವತ ಕ್ಲಬ್ ಕ್ಲಾಸ್, ಅಂಬಾರಿ ಡ್ರೀಮ್ ಕ್ಲಾಸ್, ಹವಾನಿಯಂತ್ರಿತ ಮತ್ತು ಹವಾನಿಯಂತ್ರಿತ ರಹಿತ ಸ್ಲೀಪರ್ ಸೇರಿ ಐಶಾರಾಮಿ ಬಸ್‌ಗಳ ಪ್ರಯಾಣ ದರಗಳನ್ನು ವಾರಾಂತ್ಯದ ದಿನಗಳಲ್ಲಿ ಏರಿಕೆ ಮಾಡದಿರಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ.

ಶುಕ್ರವಾರ ಹಾಗೂ ಭಾನುವಾರ ಕಾರ್ಯಾಚರಣೆ ಮಾಡುತ್ತಿದ್ದ ಬಸ್‌ಗಳಲ್ಲಿ ಶೇ 10ರಷ್ಟು ಹೆಚ್ಚುವರಿ ಪ್ರಯಾಣ ದರ ಪಡೆಯಲಾಗುತ್ತಿತ್ತು. ಜ.15ರಿಂದ 31ರ ಅವಧಿಗೆ ವಾರಾಂತ್ಯದಲ್ಲಿ ದರ ಹೆಚ್ಚಳ ಮಾಡದಿರಲು ನಿರ್ಧರಿಸಲಾಗಿದೆ. ಮೂಲ ದರದಲ್ಲೇ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.