ಭಾನುವಾರ, ಜನವರಿ 24, 2021
24 °C

ಕೆಪಿಎಸ್‌ಸಿ ಪರೀಕ್ಷೆಗಾಗಿ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಇದೇ 24ರಂದು ಕೆಪಿಎಸ್‌ಸಿ ನಡೆಸುತ್ತಿರುವ ಪೂರ್ವಭಾವಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆಗೆ ಕೆಎಸ್‌ಆರ್‌ಟಿಸಿ ಸಿದ್ಧತೆ ಮಾಡಿಕೊಂಡಿದೆ.

ಪರೀಕ್ಷಾ ಕೇಂದ್ರಕ್ಕೆ ಸುತ್ತಮುತ್ತಲ ಜಿಲ್ಲಾ ಕೇಂದ್ರಗಳು, ತಾಲ್ಲೂಕು ಕೇಂದ್ರಗಳಿಂದ ಪರೀಕ್ಷೆ ದಿನ ಮತ್ತು ಪರೀಕ್ಷೆಯ ಹಿಂದಿನ ದಿನ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ. ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಂದ ಬೆಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ, ಚಿತ್ರದುರ್ಗದಿಂದ ದಾವಣೆಗೆರೆ, ಉಡುಪಿಯಿಂದ ಮಂಗಳೂರು, ಚಾಮರಾಜನಗರ, ಹಾಸನ, ಮಂಡ್ಯ, ಕೊಡುಗು ಜಿಲ್ಲೆಗಳಿಂದ ಮೈಸೂರಿಗೆ, ಚಿಕ್ಕಮಗಳೂರು ಜಿಲ್ಲೆಯಿಂದ ಶಿವಮೊಗ್ಗಕ್ಕೆ ಪ್ರಯಾಣಿಕರ ಅಗತ್ಯಕ್ಕೆ ಅನುಗುಣವಾಗಿ ಬಸ್‌ಗಳು ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು