ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪಾವಳಿ: ಹೆಚ್ಚುವರಿಯಾಗಿ ಸಾವಿರ ಕೆಎಸ್‌ಆರ್‌ಟಿಸಿ ಬಸ್ ಸಂಚಾರ

Last Updated 10 ನವೆಂಬರ್ 2020, 20:37 IST
ಅಕ್ಷರ ಗಾತ್ರ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಹೆಚ್ಚುವರಿಯಾಗಿ 1,000 ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.‌

ಇದೇ 13 ಹಾಗೂ 14ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ ವಿಶೇಷ ಬಸ್‌ಗಳು ಹೊರಡಲಿವೆ. 16ರಂದು ಬೆಂಗಳೂರಿಗೆ ವಾಪಸ್ ಆಗಲಿವೆ.

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿಗೆ ಬಸ್‌ಗಳು ಸಂಚಾರ ಮಾಡಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ತೆರಳಲಿವೆ. ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳಕ್ಕೆ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್‌ಗಳು ಸಂಚರಿಸಲಿವೆ. ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವಿದೆ ಎಂದು ನಿಗಮ ತಿಳಿಸಿದೆ.

ಇ ಟಿಕೆಟ್ ಅನ್ನು www.ksrtc.in ಮೂಲಕ ಬುಕ್‌ ಮಾಡಬಹುದಾಗಿದೆ. ಗಣಕೀಕೃತ ಬುಕ್ಕಿಂಗ್ ಕೌಂಟರ್‌ ಮೂಲಕವೂ ಆಸನಗಳನ್ನು ಕಾಯ್ದಿರಿಸಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇ 5 ರಷ್ಟು ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟನ್ನು ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣ ದರದಲ್ಲಿ ಶೇ 10 ರಷ್ಟು ರಿಯಾಯಿತಿ ಇರಲಿದೆ. ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ನಿಗಮದ ಕಾರ್ಯಾಚರಣೆ ಇರುವ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಂದಲೂ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT