ಸೋಮವಾರ, ಏಪ್ರಿಲ್ 12, 2021
31 °C

ಕೆಲಸಕ್ಕೆ ಹಾಜರಾಗಿ ಚಳವಳಿ ನಡೆಸಿ: ರೈತ ಸಂಘದ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕೆಲಸಕ್ಕೆ ಹಾಜರಾಗಿ ಚಳವಳಿ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಕೆಎಸ್‌ಆರ್‌ಟಿಸಿ ನೌಕರರಿಗೆ ಸಲಹೆ ನೀಡಿದೆ.

‘ಈ ಮಾದರಿಯ ಮುಷ್ಕರಕ್ಕೆ ಸಂಘದ ಸಹಮತ ಇಲ್ಲ. ಸಾರ್ವಜನಿಕರಿಗೆ ತೊಂದರೆಯಾಗುವಂತಹ ಇಂತಹ ಮುಷ್ಕರದ ಬದಲು ಕೆಲಸಕ್ಕೆ ಹಾಜರಾಗಿ, ವಿಶಿಷ್ಟವಾಗಿ ಹಾಗೂ ನಿರಂತರವಾಗಿ ಚಳವಳಿ ನಡೆಸುವ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಸರ್ಕಾರವೂ ಬಡ ಹಾಗೂ ಮಧ್ಯಮ ವರ್ಗದವರೇ ಹೆಚ್ಚಾಗಿರುವ ಕೆಎಸ್‌ಆರ್‌ಟಿಸಿ ನೌಕರರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು