ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಆರ್‌ಟಿಸಿ: ₹ 6 ಲಕ್ಷ ದಂಡ ವಸೂಲಿ

Last Updated 13 ಜೂನ್ 2022, 15:57 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ತನಿಖಾ ತಂಡಗಳ ಮೂಲಕ ತಪಾಸಣೆ ಚುರುಕುಗೊಳಿಸಿದ್ದು, ಮೇ ತಿಂಗಳಲ್ಲಿ ಟಿಕೆಟ್‌ ರಹಿತ ಪ್ರಯಾಣಿಕರಿಂದ ₹ 6.31 ಲಕ್ಷ ದಂಡ ವಸೂಲಿ ಮಾಡಿದೆ.

ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 49,957 ಬಸ್‌ಗಳನ್ನು ತಪಾಸಣೆಗೆ ಒಳಪಡಿಸಲಾಗಿತ್ತು. 3,552 ಪ್ರಕರಣ ಪತ್ತೆಹಚ್ಚಿ, 3,898 ಟಿಕೆಟ್‌ ರಹಿತ ಪ್ರಯಾಣಿಕರಿಂದ ದಂಡ ವಸೂಲಿ ಮಾಡಲಾಗಿದೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ ₹ 81 ಸಾವಿರವನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ ಎಂದು ಕೆಎಸ್‌ಆರ್‌ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಜನರು ಟಿಕೆಟ್‌, ಪಾಸ್ ಪಡೆದು ಪ್ರಯಾಣಿಸಬೇಕು. ಟಿಕೆಟ್‌ ಇಲ್ಲದೆ ಪ್ರಯಾಣ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT