ಬುಧವಾರ, ನವೆಂಬರ್ 30, 2022
17 °C

ಸಮಾನ ವೇತನಕ್ಕೆ ಆಗ್ರಹಿಸಿ ಸಾರಿಗೆ ನೌಕರರ ಸೈಕಲ್ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಮಾನ ವೇತನಕ್ಕೆ ಆಗ್ರಹಿಸಿ ರಾಜ್ಯದಾದ್ಯಂತ ಸೈಕಲ್ ಜಾಥಾ ನಡೆಸಲು ಸಾರಿಗೆ ಸಂಸ್ಥೆಗಳ ನೌಕರರು ನಿರ್ಧರಿಸಿದ್ದಾರೆ.

ಇದೇ 10ರಂದು ಬಳ್ಳಾರಿಯಿಂದ ಜಾಥಾ ಹೊರಡಲಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಾಥಾ ಸಂಚರಿಸಲಿದೆ. ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಾರಿಗೆ ಸಂಸ್ಥೆಗಳ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದರು.

ವಜಾಗೊಂಡ ನೌಕರರ ಮರು ನೇಮಕ, ಸಮಾನ ವೇತನದ ಲಿಖಿತ ಭರವಸೆ ಈಡೇರಿಕೆ, ನೌಕರರ ಪೊಲೀಸ್ ಪ್ರಕರಣ ವಾಪಸ್ ಪಡೆಯಬೇಕು, ಸಂಘಕ್ಕೆ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿ ಈ ಜಾಥಾ ನಡೆಸಲಾಗುತ್ತಿದೆ. ಎಲ್ಲಾ ಜಿಲ್ಲಾ ಕೇಂದ್ರಗಳ ಮೂಲಕ ಜಾಥಾ ಸಂಚರಿಸಿ ಬೆಂಗಳೂರಿಗೆ ಬರಲು ಕನಿಷ್ಠ 50 ದಿನ ಬೇಕಾಗಲಿದೆ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು