ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪಾವಳಿ ಪ್ರಯುಕ್ತ ಒಂದು ಸಾವಿರ ಹೆಚ್ಚುವರಿ ಬಸ್

Last Updated 29 ಅಕ್ಟೋಬರ್ 2021, 21:25 IST
ಅಕ್ಷರ ಗಾತ್ರ

ಬೆಂಗಳೂರು: ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ನವೆಂಬರ್ 7ರವರೆಗೆ ಒಂದು ಸಾವಿರ ಹೆಚ್ಚುವರಿಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್ ಹಾಗೂ ಅಂತರರಾಜ್ಯದ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರ, ಕೋಟಯಂ, ಚೆನ್ನೈ, ಕೊಯಮತ್ತೂರು, ಪುಣೆ, ಪಣಜಿಗೆ ಹಾಗೂ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್‌ಗಳ ಸೇವೆ ಇರಲಿದೆ.

‘ಪ್ರಯಾಣದ ದರಗಳಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ. ನಿಗಮದ ವೆಬ್‍ಸೈಟ್ www.ksrtc.karnataka.gov.in ಹಾಗೂ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡ ಆಸನ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT