ಮಂಗಳವಾರ, ನವೆಂಬರ್ 29, 2022
21 °C

ಕೆಎಸ್‌ಆರ್‌ಟಿಸಿ ಸಿಬ್ಬಂದಿ ಗಳಿಕೆ ರಜೆ ಮೊತ್ತ ಪಾವತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದಸರಾ ಹಬ್ಬಕ್ಕೆ ನೌಕರರಿಗೆ ಸಿಹಿ ಸುದ್ದಿ ನೀಡಿರುವ ಕೆಎಸ್‌ಆರ್‌ಟಿಸಿ, ಗಳಿಕೆ ರಜೆ ನಗದೀಕರಣ ಮೊತ್ತ ಪಾವತಿಸುವುದಾಗಿ ತಿಳಿಸಿದೆ.

ಕೋವಿಡ್‌ನಿಂದ ಉಂಟಾಗಿದ್ದ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಸಿಬ್ಬಂದಿಗೆ ಗಳಿಕೆ ರಜೆ ಪಾವತಿಸಲು ಸಾಧ್ಯವಾಗಿರಲಿಲ್ಲ. ಆರ್ಥಿಕವಾಗಿ ಚೇತರಿಕೆ ಹಂತದಲ್ಲಿದ್ದರೂ ನೌಕರರಿಗೆ ಹಬ್ಬದ ಸಡಗರ ಹೆಚ್ಚಿಸಲು ನಿಗಮ ತೀರ್ಮಾನಿಸಿದೆ. 2021–22ನೇ ಸಾಲಿನ ಗಳಿಕೆ ರಜೆ ನಗದೀಕರಣ ಮೊತ್ತವನ್ನು ಅ.3ರಂದು ಎಲ್ಲಾ ಅರ್ಹ ಸಿಬ್ಬಂದಿಗೆ ಪಾವತಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು