ಶನಿವಾರ, ಜುಲೈ 31, 2021
25 °C

ಕೆಎಸ್‌ಆರ್‌ಟಿಸಿಯಿಂದ ತಿರುಪತಿಗೆ ಪ್ಯಾಕೇಜ್ ಪ್ರವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಿರುಪತಿ ಪ್ಯಾಕೇಜ್ ಪ್ರವಾಸವನ್ನು ಕೆಎಸ್‌ಆರ್‌ಟಿಸಿ ಶುಕ್ರವಾರದಿಂದ (ಜು.16) ಮತ್ತೆ ಆರಂಭಿಸಲಿದೆ.

ಐರಾವತ ಕ್ಲಬ್ ಕ್ಲಾಸ್(ಮಲ್ಟಿ ಆಕ್ಸೆಲ್) ಬಸ್‌ನಲ್ಲಿ ಪ್ರವಾಸ ಕರೆದೊಯ್ಯಲಾಗುತ್ತದೆ. ಪ್ರತಿದಿನ ರಾತ್ರಿ 8.45ಕ್ಕೆ ಶಾಂತಿನಗರ ನಿಲ್ದಾಣದಿಂದ ಬಸ್ ಹೊರಡಲಿದೆ. ಜಯನಗರ, ನಾಗಸಂದ್ರ, ಎನ್.ಆರ್.ಕಾಲೊನಿ, ಕೆಂಪೇಗೌಡ ಬಸ್ ನಿಲ್ದಾಣ, ದೊಮ್ಮಲೂರು, ಮಾರತಹಳ್ಳಿ, ಐಟಿಐ ಗೇಟ್ ಮತ್ತು ಕೆ.ಆರ್‌.ಪುರದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಹೊಸಕೋಟೆ ಮಾರ್ಗದಲ್ಲಿ ಪ್ರಯಾಣ ಮುಂದುವರಿಸಲಾಗುವುದು.

ಮೈಸೂರು ರಸ್ತೆ ಸ್ಯಾಟಲೈಟ್ ನಿಲ್ದಾಣದಿಂದ ರಾತ್ರಿ 8.30ಕ್ಕೆ ಹೊರಡುವ ಮತ್ತೊಂದು ಬಸ್, ವಿಜಯನಗರ ಟಿಟಿಎಂಸಿ, ನವರಂಗ್, ಮಲ್ಲೇಶ್ವರ ವೃತ್ತ, ಕೆಂಪೇಗೌಡ ಬಸ್ ನಿಲ್ದಾಣ, ಐಟಿಐ ಗೇಟ್, ಕೆ.ಆರ್.ಪುರ ಮಾರ್ಗದಲ್ಲಿ ತಿರುಪತಿಗೆ ಪ್ರಯಾಣ ಮುಂದುವರಿಯಲಿದೆ.

ಭಾನುವಾರದಿಂದ ಗುರುವಾರದ ತನಕ ವಯಸ್ಕರಿಗೆ ಪ್ರಯಾಣದರ ₹2,200 ಮತ್ತು ಮಕ್ಕಳಿಗೆ (6ರಿಂದ 12 ವರ್ಷ) ₹1,800 ದರ ನಿಗದಿ ಮಾಡಲಾಗಿದೆ. ವಾರಾಂತ್ಯದ ದಿನ (ಶುಕ್ರವಾರ ಮತ್ತು ಶನಿವಾರ) ವಯಸ್ಕರಿಗೆ ₹2,600 ಮತ್ತು ಮಕ್ಕಳಿಗೆ ₹2,000 ನಿಗದಿ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು