ಬೆಂಗಳೂರು: ವಿದ್ಯಾರ್ಥಿ ಬಸ್ ಪಾಸ್ ವಿತರಣೆ ಅವಧಿ ವಿಸ್ತರಿಸಿರುವ ಕೆಎಸ್‌ಆರ್‌ಟಿಸಿ, ವಿದ್ಯಾರ್ಥಿಗಳಿಗೆ ಆಗುವ ತೊಂದರೆ ತಪ್ಪಿಸಲು 2020–21ನೇ ಸಾಲಿನ ಪಾಸ್ ಅವಧಿಯನ್ನು ಸೆ.25ರವರೆಗೆ ವಿಸ್ತರಿಸಿದೆ.
ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿ ಪಾಸ್ ಪಡೆಯಬೇಕಿದೆ. ಅಲ್ಲಿಯ ತನಕ ಹಿಂದಿನ ವರ್ಷದ ಪಾಸ್ ಬಳಸಿ ಪ್ರಯಾಣಿಸಬಹುದು. ಪಾಸ್ ಪಡೆಯದಿರುವ ವಿದ್ಯಾರ್ಥಿಗಳು ಶಾಲಾ–ಕಾಲೇಜುಗಳಿಂದ ನೀಡಿರುವ ಗುರುತಿನ ಚೀಟಿ ಮತ್ತು ಶುಲ್ಕ ಪಾವತಿಸಿರುವ ರಸೀದಿ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.