ಮಂಗಳವಾರ, ಏಪ್ರಿಲ್ 13, 2021
31 °C

ಮುಷ್ಕರ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ತೊಂದರೆ ತಪ್ಪಿಸಲು ಪರ್ಯಾಯ ಬೋಧನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದಿಂದಾಗುವ ತೊಂದರೆ ತಪ್ಪಿಸಲು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಅಥವಾ ಪರ್ಯಾಯ ವಿಧಾನ ಬಳಸಿಕೊಂಡು ಪಾಠ ಬೋಧನೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಎಲ್ಲ ಜಿಲ್ಲೆಗಳ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.

ತರಗತಿಗಳಿಗೆ ವಿದ್ಯಾರ್ಥಿಗಳ ನೇರ ಹಾಜರಾತಿ ಕಡ್ಡಾಯ ಅಲ್ಲ. ಆದರೆ, ತರಗತಿಗಳಿಗೆ ಹಾಜರಾಗುವವರಿಗೆ ಸಾರಿಗೆ ನೌಕರರ ಮುಷ್ಕರದಿಂದ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ, ತುರ್ತು ಸಂದರ್ಭಗಳಲ್ಲಿ ಆಯಾ ಜಿಲ್ಲಾಡಳಿತದ ಸೂಚನೆ ಅನ್ವಯ ಕ್ರಮ ತೆಗೆದುಕೊಳ್ಳಬೇಕು ಎಂದೂ ಅವರು ಸಲಹೆ ನೀಡಿದ್ದಾರೆ.

ಆರನೇ ವೇತನ ಆಯೋಗದ ಶಿಫಾರಸು ಅನ್ವಯ ಆಗಲೇಬೇಕು ಎಂದು ಸಾರಿಗೆ ನೌಕರರ ಕೂಟ ಪಟ್ಟು ಹಿಡಿದಿದ್ದು, ಮುಷ್ಕರ ನಡೆಸುತ್ತಿದೆ.

ಓದಿ: 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.