ಬುಧವಾರ, ಫೆಬ್ರವರಿ 1, 2023
26 °C

KSRTC ನೂತನ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ₹35,000 ಬಹುಮಾನ ಗೆಲ್ಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಆರಂಭಿಸಲಿರುವ ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ ಬ್ರಾಂಡ್ ಹೆಸರು ಟ್ಯಾಗ್‌ಲೈನ್ ಹಾಗೂ ಗ್ರಾಫಿಕ್ಸ್‌ ಆಹ್ವಾನಿಸಿದೆ.

ಪ್ರತಿ ಮಾದರಿಯ ವಾಹನಗಳಿಗೆ ಉತ್ತಮ ಬ್ರಾಂಡ್ ಹೆಸರನ್ನು ಸೂಚಿಸುವ ವಿಜೇತರಿಗೆ ₹10,000 ನಗದು ಬಹುಮಾನವನ್ನು ಹಾಗೂ ಉತ್ತಮ ಗ್ರಾಫಿಕ್ಸ್ ನೀಡಿದವರಿಗೆ ತಲಾ ₹ 25,000 ಬಹುಮಾನವನ್ನು ನೀಡಲಾಗುವುದು. ಹೆಸರನ್ನು ಸೂಚಿಸಲು ಕಡೆಯ ದಿನಾಂಕ ಡಿಸೆಂಬರ್ 5 ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮ ಬ್ರ್ಯಾಂಡ್ ಐಡಿಯಾಗಳನ್ನು cpro @ksrtc.org ಇ–ಮೇಲ್ ಗೆ ಅಥವಾ ನಿಗಮದ ಫೇಸ್‌ಬುಕ್/ಟ್ವಿಟರ್ ಖಾತೆಗೆ ಸಲ್ಲಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು