ಬುಧವಾರ, ನವೆಂಬರ್ 25, 2020
24 °C

ಹೈದರಾಬಾದ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಪುನರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್ಆರ್‌ಟಿಸಿ) ಮಂಗಳವಾರದಿಂದ ಬೆಂಗಳೂರು ಮತ್ತು ಮೈಸೂರಿನಿಂದ ಹೈದರಾಬಾದ್‌ಗೆ ಬಸ್‌ ಸೇವೆ ಪುನರಾರಂಭಿಸಲಿದೆ.

ಕೋವಿಡ್-19 ಹಾಗೂ ಲಾಕ್‍ಡೌನ್ ಕಾರಣದಿಂದ ಅಂತರರಾಜ್ಯ ಸಾರಿಗೆಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಇದೀಗ, ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಸ್‌ಗಳ ಕಾರ್ಯಾಚರಣೆ ಪುನರಾರಂಭಿಸಲಾಗುತ್ತಿದೆ. ಎಲ್ಲ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಮುಂಗಡ ಆಸನಗಳನ್ನು www.ksrtc.in ವೆಬ್‌ಸೈಟ್‌ ಹಾಗೂ ನಿಗಮದ/ಫ್ರಾಂಚೈಸಿ ಕೌಂಟರ್‌ಗಳ ಮುಖಾಂತರ ಕಾಯ್ದಿರಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು