ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಪ್ರಿಲ್ 7ರಿಂದ ಸಾರಿಗೆ ನೌಕರರ ಮುಷ್ಕರ

Last Updated 16 ಮಾರ್ಚ್ 2021, 19:19 IST
ಅಕ್ಷರ ಗಾತ್ರ

ಬೆಂಗಳೂರು: ನಿಗದಿತ ಗಡುವು ಮೀರಿದ್ದರೂ ಬೇಡಿಕೆಗಳ ಈಡೇರಿಕೆ ಬಗ್ಗೆ ಸರ್ಕಾರದಿಂದ ಸ್ಪಷ್ಟತೆ ಸಿಗದ ಕಾರಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಡ ಏಪ್ರಿಲ್ 7ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದೆ.

ಈ ಸಂಬಂಧ ನೌಕರರ ಕೂಡ ಸರ್ಕಾರಕ್ಕೆ ಮಂಗಳವಾರ ನೋಟಿಸ್ ನೀಡಿದೆ. ನೋಟಿಸ್ ಪ್ರತಿಯನ್ನು ಸಾರಿಗೆ ಸಚಿವರು, ನಾಲ್ಕು ಸಾರಿಗೆ ನಿಗಮಗಳ ಮುಖ್ಯಸ್ಥರು, ಕಾರ್ಮಿಕ ಇಲಾಖೆ ಆಯುಕ್ತರಿಗೂ ಕಳುಹಿಸಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಸರ್ಕಾರ ಮತ್ತು ನೌಕರರ ಕೂಟದ ನಡುವೆ ಸಂಧಾನ ನಡೆದಿತ್ತು. ಮೂರು ತಿಂಗಳಲ್ಲಿ ಬೇಡಿಕೆ ಈಡೇರಿಸುವ ಭರವಸೆಯನ್ನು ಸರ್ಕಾರ ನೀಡಿತ್ತು. ಮಾ. 15ಕ್ಕೆ ಈ ಗಡುವು ಪೂರ್ಣಗೊಂಡಿದೆ. ಆದರೆ, ಬೇಡಿಕೆಗಳ ಈಡೇರಿಕೆ ಬಗ್ಗೆ ಯಾವುದೇ ಸ್ಪಷ್ಟ ಸ್ಪಂದನೆ ದೊರೆತಿಲ್ಲ. ಹೀಗಾಗಿ, ಮುಷ್ಕರ ನಡೆಸುತ್ತಿರುವುದಾಗಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT