81 ಮಳಿಗೆಗಳ ಬಾಡಿಗೆ ಮನ್ನಾ: ಕೂಡಲ ಸಂಗಮ ಅಭಿವೃದ್ಧಿ ಮಂಡಳಿ ನಿರ್ಧಾರ
ಬೆಂಗಳೂರು: ಪ್ರವಾಹದಿಂದ ಸಂಪೂರ್ಣ ಜಲಾವೃತಗೊಂಡಿದ್ದ 81 ಮಳಿಗೆಗಳ ಎರಡು ತಿಂಗಳ ಬಾಡಿಗೆ ಮೊತ್ತ ಒಟ್ಟು ₹2.97 ಲಕ್ಷವನ್ನು ಮನ್ನಾ ಮಾಡಲು ಕೂಡಲ ಸಂಗಮ ಅಭಿವೃದ್ಧಿ ಮಂಡಳಿ ನಿರ್ಧರಿಸಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಎಂ.ಕೆ.ಹುಬ್ಬಳ್ಳಿಯಲ್ಲಿರುವ ಶರಣೆ ಗಂಗಾಂಬಿಕೆ ಐಕ್ಯ ಮಂಟಪದ ಬಳಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಪ್ರಸಕ್ತ ವರ್ಷ ₹ 1.25 ಕೋಟಿ ಅನುದಾನ ಮೀಸಲಿಡುವುದಕ್ಕೂ ಸಭೆಯಲ್ಲಿ ನಿರ್ಧರಿಸಲಾಯಿತು.
ಕೂಡಲ ಸಂಗಮದಲ್ಲಿ ನಿರ್ಮಿಸುತ್ತಿರುವ ಬಸವ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ ಕಾಮಗಾರಿಯ ಪ್ರಗತಿ ಕುರಿತು ಮುಖ್ಯಮಂತ್ರಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ₹ 94 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಮೊದಲ ಹಂತದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ವಿ. ಕತ್ತಿ, ಬಾಗಲಕೋಟೆ ಜಿಲ್ಲೆಯ ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.