ಶನಿವಾರ, ಅಕ್ಟೋಬರ್ 1, 2022
20 °C

ಕುಮಾರಸ್ವಾಮಿ ಕಣ್ಣೀರು ಬರೀ ನಾಟಕವಷ್ಟೆ: ಸಚಿವ ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ‘ಎಚ್‌.ಡಿ.ಕುಮಾರಸ್ವಾಮಿ ಅವರ ಕಣ್ಣೀರು ಭಾವನಾತ್ಮಕ ಅಲ್ಲ, ಬರೀ ನಾಟಕವಷ್ಟೆ. ಅಧಿಕಾರ ಇದ್ದಾಗ ಕೆಲಸ ಮಾಡಬೇಕು, ಕಣ್ಣೀರು ಹಾಕಿದರೆ ಏನು ಪ್ರಯೋಜನ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಗುರುವಾರ ಪ್ರಶ್ನಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಅವರು ಮುಖ್ಯಮಂತ್ರಿಯಾಗಿದ್ದಾಗ ಫೈವ್‌ ಸ್ಟಾರ್‌ ಹೋಟೆಲ್‌ನಲ್ಲಿ ಇದ್ದು ಸರ್ಕಾರ ನಡೆಸುತ್ತಿದ್ದರು. ಈ ವಿಚಾರದ ಬಗ್ಗೆ ಅವರು ಇಲ್ಲಿಯವರೆಗೂ ಉತ್ತರ ಕೊಡಲು ಸಾಧ್ಯವಾಗಿಲ್ಲ’ ಎಂದರು.

‘ಎಸಿಬಿಯನ್ನು ರದ್ದು ಮಾಡಿರುವ ಹೈಕೋರ್ಟ್‌ ಆದೇಶವನ್ನು ನಾವು ಗೌರವಿಸುತ್ತೇವೆ. ಶೀಘ್ರ ಪಕ್ಷ ಹಾಗೂ ಸರ್ಕಾರದ ನಿಲುವನ್ನು ತಿಳಿಸುತ್ತೇವೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು