ಜಿ.ಟಿ ದೇವೇಗೌಡ ನಿವಾಸಕ್ಕೆ ಎಚ್‌ಡಿಕೆ ಭೇಟಿ: ಕುಟುಂಬಕ್ಕೆ ಸಾಂತ್ವನ

ಮೈಸೂರು: ಮೊಮ್ಮಗಳ ಅಗಲಿಕೆಯ ದುಃಖದಲ್ಲಿರುವ ಶಾಸಕ ಜಿ.ಟಿ ದೇವೇಗೌಡ ಅವರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಜಿ.ಟಿ ದೇವೇಗೌಡ ಅವರ ಮಗನಾದ ಜಿ.ಟಿ ಹರೀಶ್ ಅವರ ಪುತ್ರಿ ಗೌರಿ ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಶನಿವಾರ ತಡರಾತ್ರಿ ನಿಧನ ಹೊಂದಿದ್ದರು.
ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಮೈಸೂರು ತಾಲೂಕಿನ ಗುಂಗ್ರಾಲ್ ಗ್ರಾಮದ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದರು.
ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಗೌರಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು. ಇಂದು ಕೂಡ ಕುಮಾರಸ್ವಾಮಿ ಅವರೊಂದಿಗೆ ಆಗಮಿಸಿದ್ದರು.
ಜೆಡಿಎಸ್ ಶಾಸಕರಾದ ಸಾ.ರಾ.ಮಹೇಶ್, ಪುಟ್ಟರಾಜು, ಅಶ್ವಿನ್ ಕುಮಾರ, ಅನ್ನದಾನಿ, ಕೆ ಮಹದೇವ್ ಹಾಗೂ ಸ್ವಾಮೀಜಿಗಳು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.