ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿವೇಣಿ ಸಂಗಮ: 12 ವರ್ಷಕ್ಕೊಮ್ಮೆ ಕುಂಭಮೇಳ

ತೀರ್ಥ ಪ್ರೋಕ್ಷಣೆ ಮಾಡಿಕೊಂಡ ಮುಖ್ಯಮಂತ್ರಿ ಬೊಮ್ಮಾಯಿ
Last Updated 16 ಅಕ್ಟೋಬರ್ 2022, 21:35 IST
ಅಕ್ಷರ ಗಾತ್ರ

ತ್ರಿವೇಣಿ ಸಂಗಮ (ಮಂಡ್ಯ ಜಿಲ್ಲೆ): ‘ಕಾವೇರಿ–ಹೇಮಾವತಿ–ಲಕ್ಷ್ಮಣತೀರ್ಥ ನದಿಗಳು ಕೂಡುವ ತ್ರಿವೇಣಿ ಸಂಗಮದಲ್ಲಿ ಪ್ರತಿ 12 ವರ್ಷಕ್ಕೊಮ್ಮೆ ಸರ್ಕಾರದಿಂದಲೇ ಕುಂಭ ಮೇಳ ಆಚರಿಸಲು ಶೀಘ್ರ ಆದೇಶ ಹೊರಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಕೆ.ಆರ್‌.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ–ಸಂಗಾಪುರ–‍ಪುರದಲ್ಲಿರುವ ತ್ರಿವೇಣಿ ಸಂಗಮದಲ್ಲಿ ಭಾನುವಾರ ನಡೆದ ಕುಂಭಮೇಳದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಸಂಗಮ ಸ್ಥಳವನ್ನು ತೀರ್ಥಕ್ಷೇತ್ರವನ್ನಾಗಿ ಅಭಿವೃದ್ಧಿಗೊಳಿಸಲು ಎಲ್ಲಾ ರೀತಿಯ ನೆರವು ನೀಡಲಾಗುವುದು. ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಗೊಳಿಸಲು ವಿಶೇಷ ಯೋಜನೆ ರೂಪಿಸಲಾಗುವುದು. ನದಿ ತೀರದಲ್ಲಿ ಸ್ನಾನಘಟ್ಟ ಸೇರಿದಂತೆ ಮೂಲ ಸೌಲಭ್ಯ ಒದಗಿಸಲು ಶೀಘ್ರ ಅನುದಾನ ಒದಗಿಸಲಾಗುವುದು’ ಎಂದು ಭರವಸೆ ನೀಡಿದರು.

ತ್ರಿವೇಣಿ ಸಂಗಮದಲ್ಲಿ ಗಂಗಾ ಪೂಜೆ ನೆರವೇರಿಸಿದ ಮುಖ್ಯಮಂತ್ರಿ ತೀರ್ಥ ಪ್ರೋಕ್ಷಣೆ ಮಾಡಿಕೊಂಡರು. ನಾಡಿನ ವಿವಿಧೆಡೆಯಿಂದ ಬಂದಿದ್ದ ಸ್ವಾಮೀಜಿಗಳೊಂದಿಗೆ, ನದಿ ತಟದಲ್ಲಿ ನೂತನವಾಗಿ ನಿರ್ಮಿಸಿರುವ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.

ಏಳು ನದಿಗಳಿಂದ ಕುಂಭಗಳಲ್ಲಿ ತರಲಾಗಿದ್ದ ತೀರ್ಥವನ್ನು ತ್ರಿವೇಣಿ ಸಂಗಮಕ್ಕೆ ಸಮರ್ಪಿಸಲಾಯಿತು. ಮುಖ್ಯಮಂತ್ರಿಯೂ ನದಿಗೆ ತೀರ್ಥ ಕುಂಭ ಸಮರ್ಪಿಸಿದರು. ಇದಾದ ನಂತರ, ಪುಣ್ಯಸ್ನಾನಕ್ಕೆ ಜನರಿಗೆ ಅವಕಾಶ ಮಾಡಿಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT