ಬೆಂಗಳೂರು: ‘ಕುಂಚಿಟಿಗ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ಸಮಿತಿ ಸೂಚಿಸಿದಂತೆ ಕೇಂದ್ರದ ಹಿಂದುಳಿದ ವರ್ಗಗಳ ಜಾತಿ (ಒಬಿಸಿ) ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು. ರಾಜ್ಯ ಹಿಂದುಳಿದ ವರ್ಗಗಳ ಪ್ರವರ್ಗ 3ಎಯಿಂದ ಪ್ರವರ್ಗ–1ಕ್ಕೆ ಸೇರಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಬಳಿ ಕುಂಚಿಟಿಗರ ಮಹಾಸಭಾ ಮನವಿ ಮಾಡಿದೆ.

ಹೆಗ್ಡೆ ಅವರನ್ನು ಸೋಮವಾರ ಭೇಟಿ ಮಾಡಿದ ಮಹಾಸಭಾದಅಧ್ಯಕ್ಷ ಮುರಳೀಧರ ಹಾಲಪ್ಪ ನೇತೃತ್ವದ ನಿಯೋಗ ಮನವಿ ಸಲ್ಲಿಸಿದೆ.

‘ರಾಜ್ಯ ಸರ್ಕಾರ 17 ಜಿಲ್ಲೆಗಳ 37 ತಾಲ್ಲೂಕುಗಳಲ್ಲಿ ₹ 8 ಲಕ್ಷ ವೆಚ್ಚ ಮಾಡಿ ಕುಂಚಿಟಿಗ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ನಡೆಸಿದೆ. ಅಲ್ಲದೆ, ಸಮುದಾಯದ ಸ್ಥಿತಿಗತಿಯ ಸಮಗ್ರ ಮಾಹಿತಿಗಳನ್ನು ಒಳಗೊಂಡ 362 ಪುಟಗಳ ವರದಿ ಮತ್ತು ಅದರ ಆಧಾರದಲ್ಲಿ ಸಮುದಾಯವನ್ನು ಓಬಿಸಿ ಪಟ್ಟಿಗೆ ಸೇರಿಸುವಂತೆ ಕೇಂದ್ರ ಹಿಂದುಳಿದ ವರ್ಗಗಳ ಆಯೋಗಕ್ಕೆ (ಎನ್‌ಸಿಬಿಸಿ) ರಾಜ್ಯ ಹಿಂದುಳಿದ ವರ್ಗಗಳ ಇಲಾಖೆ ಶಿಫಾರಸು ಮಾಡಿತ್ತು’ ಎಂದು ಮುರಳೀಧರ ಹಾಲಪ್ಪ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.