ಬೆಂಗಳೂರು: ಕುರುಬರ ತನು, ಮನ, ಧನದ ಬಲದಿಂದ ಮುಖ್ಯಮಂತ್ರಿ ಆದ ವ್ಯಕ್ತಿ ಎಸ್.ಟಿ ಹೋರಾಟದ ಸಮಾವೇಶಕ್ಕೆ ಗೈರಾಗಿರುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಸಮಾವೇಶದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಅವರು ಸಿದ್ದರಾಮಯ್ಯ ಅವರ ಹೆಸರು ಉಲ್ಲೇಖಿಸದೆ ಅವರು ಗೈರಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

'ಇದು ಸಮಸ್ತ ಕುರುಬ ಸಮುದಾಯದ ಪರವಾಗಿ ನಡೆಯುತ್ತಿರುವ ಹೋರಾಟ. ಇಲ್ಲಿ ರಾಜಕೀಯ ಕಾರ್ಯಸೂಚಿ ಇಲ್ಲ. ಕುರುಬರ ಬೆಂಬಲದಿಂದ ಮುಖ್ಯಮಂತ್ರಿ ಆದವರು ಈ ಬಗ್ಗೆ ಕಣ್ಣು ತೆರೆದು ನೋಡಬೇಕು' ಎಂದರು.

ಸಮುದಾಯದ ಸ್ವಾಮೀಜಿಗಳು ಕುರುಬರಿಗೆ ನ್ಯಾಯ ಕೇಳುವುದಕ್ಕಾಗಿ 340 ಕಿಲೋಮೀಟರ್ ನಡೆದು ಬಂದಿದ್ದಾರೆ. ಸಮುದಾಯದ ಬಲ ಪಡೆದು ಮುಖ್ಯಮಂತ್ರಿ ಆದ ವ್ಯಕ್ತಿ ಸ್ವಾಮೀಜಿಗಳನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಬೇಕಿತ್ತು. ಪಾದಯಾತ್ರೆಯ ಅನುಭವವನ್ನು ಕೇಳಬೇಕಿತ್ತು. ಆದರೆ ಆ ವ್ಯಕ್ತಿ ಅಂತಹ ಕೆಲಸ ಮಾಡಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ... ಪರಿಶಿಷ್ಟ ಪಂಗಡ ಸ್ಥಾನಮಾನಕ್ಕೆ ಬೇಡಿಕೆ: ಕುರುಬರ ಸಮಾವೇಶಕ್ಕೆ ಹರಿದುಬಂದ ಜನಸಾಗರ

‘ಸಿದ್ದರಾಮಯ್ಯ’ ಸೃಷ್ಟಿಸಿದ ರೋಮಾಂಚನ

ಸಮಾವೇಶದಲ್ಲಿ ಒಮ್ಮೆ ಮಾತ್ರ ಸಿದ್ದರಾಮಯ್ಯ ಅವರ ಹೆಸರು ನೇರವಾಗಿ ಪ್ರಸ್ತಾಪವಾಯಿತು. ಎಚ್.ಎಂ. ರೇವಣ್ಣ ಹೊರತಾಗಿ ಯಾರೂ ಸಿದ್ದರಾಮಯ್ಯ ಹೆಸರನ್ನು ಉಲ್ಲೇಖಿಸಲಿಲ್ಲ. ‘ಕುರುಬ ಸಮುದಾಯದ ಹೋರಾಟ ಫಲವಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು’ ಎಂದು ರೇವಣ್ಣ ತಮ್ಮ ಭಾಷಣದಲ್ಲಿ ಉಲ್ಲೇಖಿಸುತ್ತಿದ್ದಂತೆ ಸಮಾವೇಶದಲ್ಲಿದ್ದ ಜನರು ಮೈಮರೆತು ಸಂಭ್ರಮಿಸಿದರು. ಕೆಲವು ನಿಮಷಗಳ ಕಾಲ ಚಪ್ಪಾಳೆ, ಶಿಳ್ಳೆ, ಕೇಕೆ ಹಾಕಿ ಕುಣಿದಾಡಿದರು.

ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸುತ್ತಿದ್ದಂತೆ ಜನರು ವ್ಯಕ್ತಪಡಿಸಿದ ಪ್ರತಿಕ್ರಿಯೆಯನ್ನು ಕಂಡ ವೇದಿಕೆಯಲ್ಲಿದ್ದ ಗಣ್ಯರು ಕಕ್ಕಾಬಿಕ್ಕಿಯಾದರು. ಅದು ಸಚಿವ ಈಶ್ವರಪ್ಪ ಸೇರಿದಂತೆ ಕೆಲವರ ಮಾತಿನಲ್ಲಿ ಪರೋಕ್ಷವಾಗಿ ವ್ಯಕ್ತವೂ ಆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.