ಬುಧವಾರ, ಜನವರಿ 20, 2021
16 °C

ಕುರುಬ ಸಮುದಾಯದ ಮುಖಂಡರಿಂದ ಸಿ.ಎಂ ಭೇಟಿ; ಮೂವರಿಗೆ ಸಚಿವ ಸ್ಥಾನದ ಬೇಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕು, ಕುರುಬ ಅಭಿವೃದ್ಧಿ ನಿಗಮ ಸ್ಥಾಪಿಸಿ ₹500 ಕೋಟಿ ಅನುದಾನ ನೀಡಬೇಕು ಮತ್ತು ಮೂವರು ಕುರುಬ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂಬ ಬೇಡಿಕೆಗಳನ್ನು ಕುರುಬ ಸಮುದಾಯದ ಮುಖಂಡರ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮುಂದಿಟ್ಟಿದೆ.

ಕಾಗಿನೆಲೆ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನೇತೃತ್ವದಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುರುಬ ಸಮುದಾಯದ ಜನಪ್ರತಿನಿಧಿಗಳು ಮತ್ತು ಮುಖಂಡರ ನಿಯೋಗ ಮೂರು ಬೇಡಿಕೆಗಳುಳ್ಳ ಮನವಿ ಸಲ್ಲಿಸಿತು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ‘ಮೂರು ಬೇಡಿಕೆಗಳನ್ನು ಮುಖ್ಯಮಂತ್ರಿಯವರ ಮುಂದಿಟ್ಟಿದ್ದೇವೆ. ಕುರುಬ ಸಮುದಾಯಕ್ಕೆ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದೇವೆ’ ಎಂದರು.

ವಿಧಾನ ಪರಿಷತ್ ಸದಸ್ಯರಾದ ಎಂ.ಟಿ.ಬಿ. ನಾಗರಾಜ್, ಆರ್. ಶಂಕರ್ ನಿಯೋಗದಲ್ಲಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು