ಸೋಮವಾರ, ನವೆಂಬರ್ 30, 2020
20 °C

ಕುರುಬ ಸಮುದಾಯ ಎಸ್‌.ಟಿ ಸೇರ್ಪಡೆಗೆ ಒತ್ತಾಯ; ಜ.15ರಿಂದ ಬೆಂಗಳೂರಿಗೆ ಪಾದಯಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ರಾಜ್ಯದಾದ್ಯಂತ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿ ಕನಕ ಪೀಠದ ಗುರುಗಳ ನೇತೃತ್ವದಲ್ಲಿ ಜನವರಿ 15ರಿಂದ ಫೆಬ್ರುವರಿ 7ರವರೆಗೆ ಕಾಗಿನೆಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ’ ಎಂದು ಕುರುಬ ಎಸ್‌.ಟಿ ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಕೆ.ವಿ. ವಿರೂಪಾಕ್ಷಪ್ಪ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯಪೂರ್ವ ದೇಶವನ್ನಾಳಿದ ಬ್ರಿಟಿಷ್‌ ಸರ್ಕಾರ ನಮ್ಮನ್ನು ಬುಡಕಟ್ಟು ಜನಾಂಗವೆಂದು ಕರೆದಿತ್ತು. ದಕ್ಷಿಣ ಭಾರತದ ಅತ್ಯಂತ ಪುರಾತನ ಮೂಲ ನಿವಾಸಿಗಳು, ಅರೆನಾಗರಿಕ ಬುಡಕಟ್ಟು ಜನಾಂಗದವರೆಂದು ಅವರು ದಾಖಲಿಸಿದ್ದಾರೆ. ಸ್ವಾತಂತ್ರ್ಯಾನಂತರ ನಮ್ಮ ಉಪಪಂಗಡದ ಕೆಲವು ಜಾತಿಗಳು ಪರಿಶಿಷ್ಟ ಜಾತಿಗೆ ಸೇರಿ, ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಮುಂದಾದವು. ಅದರಿಂದ ನಿಜವಾದ ಕುರುಬರಿಗೆ ಅನ್ಯಾಯವಾಗಿದೆ’ ಎಂದರು.

‘ಕುರುಬ ಸಮುದಾಯದ ಕುರುಬ, ಗೊಂಡ, ಕಾಡುಕುರುಬ, ಜೇನುಕುರುಬ, ಕುರುಂಬನ್‌ ಮತ್ತು ಕಟ್ಟುನಾಯಕನ್‌ ಮೂಲ ಜಾತಿಗಳನ್ನು ಕೊಡಗು ಜಿಲ್ಲೆಯಲ್ಲಿ ಮಾತ್ರ ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ. ರಾಜ್ಯದಾದ್ಯಂತ ವಿಸ್ತರಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲು, ಕುರುಬರ ಎಸ್‌.ಟಿ ಹೋರಾಟ ಸಮಿತಿ ರಚಿಸಿಕೊಂಡು ಯೋಜನೆ ಸಿದ್ಧಪಡಿಸುತ್ತಿದ್ದೇವೆ’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು