ಶನಿವಾರ, ಮೇ 8, 2021
24 °C

ಕುರುಬ ಎಸ್‌ಟಿ ಸಮಿತಿ ನಿಯೋಗ ದೆಹಲಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌.ಟಿ ಪಟ್ಟಿಗೆ ಸೇರಿಸಲು ಸಹಕಾರ ನೀಡುವಂತೆ ಕೇಂದ್ರ ಸಮಾಜ ಕಲ್ಯಾಣ ಸಚಿವ ಅರ್ಜುನ ಮುಂಡಾ ಮತ್ತು ಹಿರಿಯ ನಾಯಕರನ್ನು ಭೇಟಿ ಮಾಡಿ ಮನವಿ ಮಾಡಲು ಕುರುಬರ ಎಸ್.ಟಿ ಹೋರಾಟ ಸಮಿತಿಯ ನಿಯೋಗ ಸೋಮವಾರ ದೆಹಲಿಗೆ ತೆರಳಲಿದೆ.

ನಿಯೋಗದ ನೇತೃತ್ವವನ್ನು ಕುರುಬ ಸಮುದಾಯದ ನಿರಂಜನಾನಂದಪುರಿ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ, ಸಿದ್ದರಾಮಾನಂದಪುರಿ ಸ್ವಾಮೀಜಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಹಿಸಲಿದ್ದಾರೆ.

ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್, ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ಬಂಡೆಪ್ಪ ಕಾಶೆಂಪೂರ್, ಹೋರಾಟ ಸಮಿತಿ ಅಧ್ಯಕ್ಷ ಕೆ. ವಿರುಪಾಕ್ಷಪ್ಪ, ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಡಿ. ವೆಂಕಟೇಶಮೂರ್ತಿ, ಅಹಿಂದ ಮುಖಂಡರಾದ ಕೆ. ಮುಕುಡಪ್ಪ, ಸಮಿತಿ ಖಜಾಂಚಿ ಕೆ.ಈ. ಕಾಂತೇಶ, ಟಿ.ಬಿ. ಬಳಗಾವಿ, ಕೆ. ಬಿ. ಶಾಂತಪ್ಪ, ಪುಟ್ಟಸ್ವಾಮಿ, ಸಮಿತಿ ಪ್ರಧಾನ ಕಾರ್ಯದರ್ಶಿ ಆನೇಕಲ್ ದೊಡ್ಡಯ್ಯ ಕೂಡಾ ನಿಯೋಗದಲ್ಲಿ ಇರಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು