ಮಂಗಳವಾರ, ಮಾರ್ಚ್ 21, 2023
28 °C

ಕೆಯುಡಬ್ಲ್ಯುಜೆ: ದತ್ತಿ ನಿಧಿ ಪ್ರಶಸ್ತಿಗೆ ಶಂಕರ ಪಾಗೋಜಿ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿಯ ಮಾಧ್ಯಮ ಸಂಯೋಜಕ ರಾಗಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಅವರ ಹೆಸರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ (ಕೆಯುಡಬ್ಲ್ಯುಜೆ) ಸ್ಥಾಪಿಸಿರುವ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗೆ ಪತ್ರಕರ್ತ ಶಂಕರ ಪಾಗೋಜಿ ಅವರನ್ನು ಆಯ್ಕೆ ಮಾಡಲಾಗಿದೆ.

ಸದ್ಯ ಮುಖ್ಯಮಂತ್ರಿಯ ಮಾಧ್ಯಮ ಸಂಯೋಜಕರಾಗಿರುವ ಪಾಗೋಜಿ, ವಿವಿಧ ಮುದ್ರಣ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ.  ವಿಜಯಪುರದಲ್ಲಿ ಫೆ.4 ಮತ್ತು 5 ರಂದು ನಡೆಯಲಿರುವ ಪತ್ರಕರ್ತರ\ 37ನೇ ರಾಜ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿವಂಗತ ಗುರುಲಿಂಗ ಸ್ವಾಮಿ ಹೊಳಿಮಠ ಹೆಸರಿನ ದತ್ತಿನಿಧಿಗೆ ಚಾಲನೆ ನೀಡಿ,  ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು