ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಹತ್ಯೆಗೆ ಯತ್ನ: ಪತಿಗೆ ಚಿಕಿತ್ಸೆಗಾಗಿ ಪತ್ನಿ ಪರದಾಟ

Last Updated 23 ಆಗಸ್ಟ್ 2020, 10:28 IST
ಅಕ್ಷರ ಗಾತ್ರ

ಬೆಳಗಾವಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸ್ಪಂದಿಸದೆ ಮಹಿಳೆಯೊಬ್ಬರು ಪರದಾಡಿದ ಘಟನೆ ಶನಿವಾರ ನಡೆದಿದೆ. ನಗರದ ಖಾಸಗಿ ಆಸ್ಪತ್ರೆಯೊಂದರ ಆವರಣದಲ್ಲಿ ಸಲೈನ್‌ ಬಾಟಲಿ ಕೈಯಲ್ಲಿ ಹಿಡಿದುಕೊಂಡು ಪತಿ ಬಳಿ ನಿಂತು ಅಸಹಾಯಕತೆಯಿಂದ ಕಣ್ಣೀರಿಡುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಸ್ಪತ್ರೆಗಳ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಕ್ಕೇರಿ ತಾಲ್ಲೂಕಿನ ನಿಡಸೋಸಿ ಗ್ರಾಮದ ದುರದುಂಡಿ ಹೂಗಾರ ಎನ್ನುವವರು, ಮನೆಯಲ್ಲಿ ನಡೆದ ಗಲಾಟೆಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಕುಟುಂಬದವರು ಸಂಕೇಶ್ವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದರು. ಸಲೈನ್ ಹಾಕಿ ಆರೈಕೆ ಮಾಡಿದ್ದ ಅಲ್ಲಿನ ವೈದ್ಯಕೀಯ ಸಿಬ್ಬಂದಿ, ಹೆಚ್ಚಿನ ಚಿಕಿತ್ಸೆಗಾಗಿ ಬಿಮ್ಸ್ ಆಸ್ಪತ್ರೆಗೆ ಹೋಗುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಆದರೆ, ಬಿಮ್ಸ್‌ನಲ್ಲಿ ಕೋವಿಡ್‌ ರೋಗಿಗಳಿಗೆ ಮಾತ್ರ ಹಾಸಿಗೆಗಳನ್ನು ಮೀಸಲಿಡಲಾಗಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗೆ ಹೋಗುವಂತೆ ಅಲ್ಲಿನ ಸಿಬ್ಬಂದಿ ತಿಳಿಸಿದ್ದಾರೆ ಎನ್ನಲಾಗಿದೆ.

ಖಾಸಗಿ ಆಸ್ಪತ್ರೆಯಲ್ಲಿ ವಿಚಾರಿಸಿದಾಗ, ದಿನಕ್ಕೆ ₹30ಸಾವಿರ ಶುಲ್ಕ ಕಟ್ಟಬೇಕಾಗುತ್ತದೆ ಎಂದು ಸಿಬ್ಬಂದಿ ತಿಳಿಸಿದ್ದರಿಂದಾಗಿ, ಮಹಿಳೆಯು ಪತಿಯನ್ನು ಕೆಲ ಕಾಲ ಕಲ್ಲು ಬೆಂಚಿನ ಮೇಲೆಯೇ ಮಲಗಿಸಿದ್ದರು. ಬಳಿಕ ಪತಿಯನ್ನು ಕರೆದುಕೊಂಡು ಹೋಗಿ, ಸಂಕೇಶ್ವರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ತಿಳಿದುಬಂದಿದೆ.

ಮಹಿಳೆ ಪರದಾಟದ ದೃಶ್ಯವನ್ನು ವ್ಯಕ್ತಿಯೊಬ್ಬರು ವಿಡಿಯೊ ಮಾಡಿ ವಾಟ್ಸ್‌್ಆ್ಯಪ್‌ನಲ್ಲಿ ಹಂಚಿಕೊಂಡಿದ್ದಾರೆ. ನಂತರ ಅದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT