ಕೆರೆ ನಿರ್ವಹಣೆಗೆ ಜಿಲ್ಲಾ ಸಮಿತಿ ರಚಿಸಿ: ಹೈಕೋರ್ಟ್

ಬೆಂಗಳೂರು: ಕೆರೆಗಳ ನಿರ್ವಹಣೆ ಮತ್ತು ಅಭಿವೃದ್ಧಿ ಉದ್ದೇಶಕ್ಕಾಗಿ ಜಿಲ್ಲಾ ಮಟ್ಟದ ಸಮಿತಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಎನ್ವಿರಾನ್‌ಮೆಂಟ್ ಸಪೋರ್ಟ್ ಗ್ರೂಪ್ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಮಹಾನಗರ ಪಾಲಿಕೆ ಮತ್ತು ಪುರಸಭೆ ವ್ಯಾಪ್ತಿ ಹೊರತುಪಡಿಸಿ ಉಳಿದ ಕೆರೆಗಳ ಸಂರಕ್ಷಣೆಗೂ ಈ ಸಮಿತಿಗಳು ಅಗತ್ಯ’ ಎಂದು ತಿಳಿಸಿದೆ.
‘ಜಿಲ್ಲಾ ಮಟ್ಟದ ಸಮಿತಿಗಳಿಗೆ ಆಯಾ ಜಿಲ್ಲಾಧಿಕಾರಿಗಳು ಮುಖ್ಯಸ್ಥರಾಗಿರಬೇಕು. ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಅರಣ್ಯ ಇಲಾಖೆ ಅಧಿಕಾರಿ, ಸಣ್ಣ ನೀರಾವರಿ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್‌ಪಿಸಿಬಿ) ಪ್ರತಿನಿಧಿಗಳು ಸದಸ್ಯರಾಗಿರುತ್ತಾರೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಸದಸ್ಯ ಕಾರ್ಯದರ್ಶಿ ಆಗಿ ಕಾರ್ಯನಿರ್ವಹಿಸಬೇಕು’ ಎಂದು ಪೀಠ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.