ಶನಿವಾರ, ಏಪ್ರಿಲ್ 1, 2023
29 °C

4.11 ಲಕ್ಷ ಪಡಿತರ ಚೀಟಿ ಮಂಜೂರು: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 4.11 ಲಕ್ಷ ಪಡಿತರ ಚೀಟಿಗಳನ್ನು ಮಂಜೂರು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸೋಮವಾರ ನಡೆದ ಜನಸೇವಕ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಈ ವಿಷಯ ಪ್ರಕಟಿಸಿದ ಅವರು, ‘ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳು ಹಲವು ವರ್ಷಗಳಿಂದ ಬಾಕಿ ಇದ್ದವು. ಎಲ್ಲವನ್ನೂ ಅನುಮೋದಿಸಲಾಗಿದೆ. ಹೊಸ ಪಡಿತರ ಚೀಟಿಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಿದ್ದೇನೆ’ ಎಂದರು.

‘2.66 ಲಕ್ಷ ಆದ್ಯತಾ ವಲಯದ (ಬಡತನ ರೇಖೆಗಿಂತ ಕೆಳಗಿರುವ– ಬಿಪಿಎಲ್‌) ಮತ್ತು 1.45 ಎಪಿಎಲ್ ಪಡಿತರ ಚೀಟಿಗಳಿಗೆ ಅನುಮೋದನೆ ನೀಡಿದ್ದೇನೆ. ಇದರಿಂದ 4.11 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು.

ಹೆಚ್ಚುವರಿ ಹೊರೆ ಇಲ್ಲ: ಇತ್ತೀಚಿನ ಕೆಲವು ತಿಂಗಳುಗಳಲ್ಲಿ 2.70 ಲಕ್ಷಕ್ಕೂ ಹೆಚ್ಚು ಬಿಪಿಎಲ್‌ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ. ಅಷ್ಟೇ ಸಂಖ್ಯೆಯ ಹೊಸ ಬಿಪಿಎಲ್‌ ಪಡಿತರ ಚೀಟಿಗಳನ್ನು ಮಂಜೂರು ಮಾಡಲಾಗಿದೆ. ಹೀಗಾಗಿ ಹೊಸ ಪಡಿತರ ಚೀಟಿಗಳ ಮಂಜೂರಾತಿಯಿಂದ ಸರ್ಕಾರದ ಬೊಕ್ಕಸದ ಮೇಲೆ ಯಾವುದೇ ಹೊರೆ ಆಗುವುದಿಲ್ಲ ಎಂದು ಆಹಾರ ಇಲಾಖೆ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು