ಶನಿವಾರ, ಜನವರಿ 16, 2021
24 °C

ಕಲಾ ಪ್ರದರ್ಶನಕ್ಕೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯು 49ನೇ ವಾರ್ಷಿಕ ಕಲಾ ಪ್ರದರ್ಶನಕ್ಕೆ ಚಿತ್ರಕಲಾವಿದರಿಂದ ಅರ್ಜಿ ಆಹ್ವಾನಿಸಿದೆ.

ಕಲಾ ಪ್ರದರ್ಶನ ಬಹುಮಾನಕ್ಕೆ ತೀರ್ಪುಗಾರರು ಆಯ್ಕೆ ಮಾಡಿದ ಒಟ್ಟು 10 ಕಲಾಕೃತಿಗಳ ಕಲಾವಿದರಿಗೆ ತಲಾ ₹ 25 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ನೀಡಲಾಗುತ್ತದೆ. ಪ್ರದರ್ಶನಕ್ಕೆ ಕಳುಹಿಸುವ ಕಲಾಕೃತಿಗಳು 4X4 ಅಳತೆಯನ್ನು ಮೀರಿರಬಾರದು. ಪ್ರವೇಶ ಶುಲ್ಕ ₹ 300 ನಗದು ರೂಪದಲ್ಲಿ ಅಥವಾ ಡಿಡಿ ಮೂಲಕ ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿಗೆ ಪಾವತಿಸಬೇಕಾಗುತ್ತದೆ.

ಭರ್ತಿ ಮಾಡಿದ ಅರ್ಜಿ ನಮೂನೆಯ ಜತೆಗೆ ಕಲಾಕೃತಿಯ ಛಾಯಾಚಿತ್ರ ಹಾಗೂ ದಾಖಲಾತಿಗಳನ್ನು ಡಿ.21ರ ಒಳಗೆ ಇ ಮೇಲ್ ವಿಳಾಸ 49annualshow@gmail.comಗೆ ಕಳುಹಿಸಬೇಕು. ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು–560002 ಈ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆಯ ಮೂಲಕ ಸಲ್ಲಿಸಬಹುದಾಗಿದೆ.

ಲಕೋಟೆಯ ಮೇಲೆ 49ನೇ ವಾರ್ಷಿಕ ಕಲಾ ಪ್ರದರ್ಶನಕ್ಕಾಗಿ ಅರ್ಜಿ ಎನ್ನುವುದನ್ನು ಸ್ಪಷ್ಟವಾಗಿ ಸಮೂದಿಸಿರಬೇಕು ಎಂದು ಪ್ರಕಟಣೆಯಲ್ಲಿ ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ. ಸಂಪರ್ಕಕ್ಕೆ ದೂ.: 080-2248 0297.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು