ಭಾನುವಾರ, ಫೆಬ್ರವರಿ 28, 2021
31 °C

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿತ್ರಕಲೆಯನ್ನು ಉತ್ತೇಜಿ ಸುವ ದೃಷ್ಟಿಯಿಂದ ಕರ್ನಾಟಕ ಲಲಿತ ಕಲಾ ಅಕಾಡೆಮಿಯು ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.

ಬಿ.ಎಫ್‌.ಎ, ಎಂ.ಎಫ್.ಎ ಶಿಕ್ಷಣಕ್ಕೆ ಸಂಬಂಧಿಸಿದಂತೆ ಅಭ್ಯಸಿಸುತ್ತಿರುವ 18 ರಿಂದ 23 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಸ್ವ ವಿವರದ ಜತೆಗೆ ಪಾಸ್‌ ಪೋರ್ಟ್‌ ಅಳತೆಯ ಎರಡು ಭಾವಚಿತ್ರ ಹಾಗೂ 5x6 ಅಳತೆಯ ನಾಲ್ಕು ಚಿತ್ರ ಕಲಾಕೃತಿಗಳನ್ನು ಸಲ್ಲಿಸಬೇಕು. ಶಾಲಾ–ಕಾಲೇಜುಗಳ ಮುಖ್ಯಸ್ಥರ ಶಿಫಾರಸು ಮೂಲಕ ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು–560 002 ಈ ವಿಳಾಸಕ್ಕೆ ಫೆ.6ರೊಳಗೆ ಸಲ್ಲಿಸಬೇಕು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.