ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಸುಧಾರಣೆ ಕಾಯ್ದೆ ತಿದ್ದುಪಡಿ: ಕೋರ್ಟ್‌ ತೀರ್ಪಿಗೆ ಒಳಪಡುತ್ತದೆ

Last Updated 12 ಏಪ್ರಿಲ್ 2021, 21:13 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಭೂಸುಧಾರಣೆ ಕಾಯ್ದೆ ತಿದ್ದುಪಡಿ ಆಧರಿಸಿ ವಿಲೇವಾರಿ ಆಗಿರುವ ಪ್ರಕರಣಗಳು ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತವೆ ಎಂಬುದನ್ನು ರಾಜ್ಯ ಪತ್ರದಲ್ಲಿ ಪ್ರಕಟಿಸಿ ವ್ಯಾಪಕ ಪ್ರಚಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ನಾಗರಾಜ್ ಹೊಂಗಲ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.

‘ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ತಿದ್ದುಪಡಿ ಕಾಯ್ದೆಯಡಿ ಯಾವುದೇ ಕ್ರಮಗಳನ್ನು ಕೈಗೊಂಡಿದ್ದರೂ ಅವು ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತವೆ ಎಂದು ಸುತ್ತೋಲೆ ಹೊರಡಿಸಲಾಗಿದೆ’ ಎಂದು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

‘ಸುತ್ತೋಲೆಯನ್ನಷ್ಟೇ ಹೊರಡಿಸಿದರೆ ಸಾಲದು. ಮಹತ್ವದ ಪ್ರಕರಣ ಆಗಿರುವ ಕಾರಣ ರಾಜ್ಯಪತ್ರದಲ್ಲಿ ಪ್ರಕಟಿಸಬೇಕು’ ಎಂದು ಸೂಚಿಸಿದ ಪೀಠ, ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT