ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಸುಧಾರಣಾ ಕಾಯ್ದೆ ತಿದ್ದುಪಡಿ: ಸರ್ಕಾರಕ್ಕೆ ನೋಟಿಸ್

Last Updated 25 ಆಗಸ್ಟ್ 2020, 19:19 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕಭೂ ಸುಧಾರಣಾ ತಿದ್ದುಪಡಿ ಸುಗ್ರೀವಾಜ್ಞೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌) ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ ನೀಡಲು ಆದೇಶಿಸಿದೆ.

‘ಸಣ್ಣ ರೈತರನ್ನು ವಂಚಿಸಲು ತರಾತುರಿಯಲ್ಲಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.ಇದು ರಾಜ್ಯದ ಕೃಷಿ ಉತ್ಪಾದನೆ ಮೇಲೆ ಪರಿಣಾಮ ಬೀರಲಿದೆ’ ಎಂದು ಪಿಐಎಲ್ ಸಲ್ಲಿಸಿರುವ ವಕೀಲರಾದ ಗೀತಾ ಮಿಶ್ರ ಹೇಳಿದ್ದಾರೆ.

‘ರೈತರ ಹಿತಾಸಕ್ತಿ ಕಾಪಾಡುವ ಸಲುವಾಗಿ ಕರ್ನಾಟಕ ಭೂ ಸುಧಾರಣಾ ಕಾಯ್ದೆಯನ್ನು 1961ರಲ್ಲಿ ಜಾರಿಗೆ ತರಲಾಗಿತ್ತು. ಅದಕ್ಕೆ ತಿದ್ದುಪಡಿ ತರುವ ಮೂಲಕಭೂಮಾಫಿಯಾ ತಡೆಯಲು ಇದ್ದ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ.ಇದು ಸಂವಿಧಾನ ವಿರೋಧಿ ನಡೆ’ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದೇ ವಿಷಯದ ಸಂಬಂಧ ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದ ಸಾಮಾಜಿಕ ಹೋರಾಟಗಾರ ನಾಗರಾಜ್ ಹೊಂಗಲ್ ಅವರು ಕಳೆದ ವಾರ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT