ಶನಿವಾರ, ಫೆಬ್ರವರಿ 4, 2023
21 °C

ವಿಟ್ಲದ ಬನಾರಿ ಬಾಬುಕಟ್ಟೆಯಲ್ಲಿ ಮನೆ ಮೇಲೆ ಗುಡ್ಡ ಕುಸಿದು ಆರು ಮಂದಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಟ್ಲ (ದಕ್ಷಿಣ ಕನ್ನಡ): ಮನೆ ಮೇಲೆ ಗುಡ್ಡ ಕುಸಿದು ಮನೆ ಸಂಪೂರ್ಣವಾಗಿ ನೆಲಸಮಗೊಂಡ ಪರಿಣಾಮ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ಮಂಗಳಪದವು ಸಮೀಪದ ಬನಾರಿ  ಬಾಬುಕಟ್ಟೆ ಎಂಬಲ್ಲಿ ಸಂಭವಿಸಿದೆ‌. 

ತರಕಾರಿ ವ್ಯಾಪಾರ ನಡೆಸುತ್ತಿರುವ ಅಬ್ದುಲ್ಲ ಎಂಬವರ ಮನೆಯ ಪಕ್ಕದ ಧರೆ ಜೋರಾದ ಮಳೆಗೆ ಕುಸಿದು ಮನೆ ಮೇಲೆ ಉರುಳಿ ಬಿದ್ದಿದೆ. ಇದರಿಂದ ಮನೆಯ ಸಂಪೂರ್ಣವಾಗಿ ನೆಲಸಮವಾಗಿದೆ. ಘಟನೆಯಲ್ಲಿ ಕುಟುಂಬದ ಆರು ಮಂದಿ ಮನೆಯ ಅವಷೇದದಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದರು. ತಕ್ಷಣವೇ ಕಾರ್ಯ ಪ್ರವೃತ್ತರಾದ ಸ್ಥಳೀಯರು ಆರು ಮಂದಿಯನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. 

ಮನೆ ಯಜಮಾನ ಅಬ್ದುಲ್ಲ, ಪತ್ನಿ ಜೋಹಾರ, ಮಕ್ಕಳಾದ ಅರಫಾಝ್, ಇರ್ಪಾನ್, ತಸ್ಲೀಮಾ, ಮಿಶ್ರಿಯಾ ಗಾಯಗೊಂಡಿದ್ದು, ವಿಟ್ಲ ಹಾಗೂ ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ. 

ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.