ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಜನಿಕ ವಿರೋಧ: ಭೂಮಾಪನ ಶುಲ್ಕ ಇಳಿಸಿದ ಸರ್ಕಾರ

Last Updated 10 ಫೆಬ್ರುವರಿ 2022, 20:58 IST
ಅಕ್ಷರ ಗಾತ್ರ

ಬೆಂಗಳೂರು: ಭೂಮಾಪನ, 11–ಇ ನಕ್ಷೆ, ಭೂ ಪರಿವರ್ತನೆ ಮತ್ತು ತತ್ಕಾಲ್ ಪೋಡಿಗೆ ಶುಲ್ಕ ಹೆಚ್ಚಳ ಮಾಡಿದ್ದ ಕಂದಾಯ ಇಲಾಖೆ, ಮತ್ತೊಮ್ಮೆ ಪರಿಷ್ಕರಿಸಿ ಶುಲ್ಕ ಕಡಿಮೆ ಮಾಡಿ ಆದೇಶ ಹೊರಡಿಸಿದೆ.

11–ಇ ನಕ್ಷೆ, ಭೂ ಪರಿವರ್ತನೆ ಮತ್ತು ತತ್ಕಾಲ್ ಪೋಡಿಗೆ ಗ್ರಾಮೀಣ ಪ್ರದೇಶದಲ್ಲಿ ಎರಡು ಎಕರೆಗೆ ₹2,000 ‌ಹಾಗೂ ನಂತರದ ಪ್ರತಿ ಎಕರೆಗೆ ₹400 ರಂತೆ ಗರಿಷ್ಠ ₹4,000 ನಿಗದಿ ಮಾಡಿತ್ತು. ಸಾರ್ವಜನಿಕ ವಿರೋಧ ವ್ಯಕ್ತವಾಗಿರುವ ಬೆನ್ನಲ್ಲೇ, ಅದನ್ನು ಕಡಿಮೆ ಮಾಡಿರುವ ಕಂದಾಯ ಇಲಾಖೆ, ಎರಡು ಎಕರೆಗೆ ₹1,500 ಹಾಗೂ ಪ್ರತಿ ಎಕರೆಗೆ ₹400 ರಂತೆ ನಿಗದಿ ಮಾಡಿದೆ. ಆದರೆ, ಗರಿಷ್ಠ ಮಿತಿಯನ್ನು ನಿಗದಿ ಮಾಡಿಲ್ಲ.

ನಗರ ಪ್ರದೇಶದಲ್ಲಿ ಎರಡು ಎಕರೆವರೆಗೂ ₹2,500 ಮತ್ತು ನಂತರದ ಪ್ರತಿ ಎಕರೆಗೆ ₹1,000 ದಂತೆ ಗರಿಷ್ಠ ₹5,000ದವರೆಗೆ ಶುಲ್ಕ ವಿಧಿಸಲು ಅನುಮತಿ ನೀಡಲಾಗಿತ್ತು. ಪರಿಷ್ಕರಣೆ ಆದೇಶದಲ್ಲಿ ನಗರ ಪ್ರದೇಶದ ಶುಲ್ಕದಲ್ಲಿ ಬದಲಾವಣೆ ಆಗಿಲ್ಲ. ಆದರೆ, ಗರಿಷ್ಠ ಮಿತಿ ಕೈಬಿಡಲಾಗಿದೆ.

ಹದ್ದುಬಸ್ತು ಅರ್ಜಿ ಶುಲ್ಕ ಗ್ರಾಮೀಣ ಪ್ರದೇಶದಲ್ಲಿ ಎರಡು ಎಕರೆವರೆಗೆ ₹1,500 ಹಾಗೂ ನಂತರದ ಪ್ರತಿ ಎಕರೆಗೆ ₹300ರಂತೆ ಗರಿಷ್ಠ ₹3,000 ನಿಗದಿ ಮಾಡಿತ್ತು. ಅದನ್ನು ಪರಿಷ್ಕರಿಸಿ ಎರಡು ಎಕರೆವರೆಗೂ ₹500 ನಂತರದ ಪ್ರತಿ ಎಕರೆಗೆ ₹300 ನಿಗದಿ ಮಾಡಲಾಗಿದೆ. ನಗರ ಪ್ರದೇಶದಲ್ಲಿ ಹದ್ದುಬಸ್ತು ಅರ್ಜಿಗೆ ಎರಡು ಎಕರೆವರೆಗು ₹2,000 ನಂತರ ಪ್ರತಿ ಎಕರೆಗೆ ₹400 ರಂತೆ ಗರಿಷ್ಠ ₹4,000 ನಿಗದಿ ಮಾಡಲಾಗಿತ್ತು. ಇದರಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ, ಗ್ರಾಮೀಣ ಮತ್ತು ನಗರ ಪ್ರದೇಶ ಎರಡೂ ಕಡೆ ಗರಿಷ್ಠ ಮಿತಿ ಕೈಬಿಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT