ಶುಕ್ರವಾರ, ಮೇ 27, 2022
26 °C

ನಂದಿಬೆಟ್ಟ: ದಿಬ್ಬ ಕುಸಿದೆಡೆ ಸ್ಟೀಲ್ ಬ್ರಿಡ್ಜ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿಗಿರಿಧಾಮದಲ್ಲಿ ದಿಬ್ಬ ಕುಸಿದು ಹಾಳಾಗಿರುವ ರಸ್ತೆಯಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಿಸಲು ಲೋಕೋಪಯೋಗಿ ಇಲಾಖೆ ಮುಂದಾಗಿದೆ.

ಈ ಸಂಬಂಧ ಲೋಕೋಪಯೋಗಿ ಇಲಾಖೆ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಜಯಪ್ರಸಾದ್ ಮಂಗಳವಾರ ಗುಡ್ಡ ಕುಸಿದು ರಸ್ತೆ ಹಾಳಾಗಿರುವ ಸ್ಥಳವನ್ನು ಪರಿಶೀಲಿಸಿದರು.

ಸುಮಾರು 40 ಮೀಟರ್ ಉದ್ದದ ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಈ ವೇಳೆ ನಿರ್ಧರಿಸಲಾಯಿತು. ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೂ ಮುನ್ನ ಪೈಪ್‌ಗಳನ್ನು ಅಳವಡಿಸಿ ತಾತ್ಕಾಲಿಕ ಸೇತುವೆ ಒಳಗೊಂಡ ರಸ್ತೆ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಈ ತಾತ್ಕಾಲಿಕ ರಸ್ತೆ ನಿರ್ಮಿಸಿದರೆ ಗಿರಿಧಾಮಕ್ಕೆ ಯಥಾಪ್ರಕಾರ ಪ್ರವಾಸಿಗರು ಭೇಟಿ ನೀಡಬಹುದು.

‘ಸ್ಟೀಲ್ ಬ್ರಿಡ್ಜ್ ನಿರ್ಮಾಣ ಸಂಬಂಧ ಶೀಘ್ರದಲ್ಲಿಯೇ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಗೊಳ್ಳಲಿದೆ. ಕನಿಷ್ಠ ಒಂದು ತಿಂಗಳ ಒಳಗಾಗಿ ತಾತ್ಕಾಲಿಕ ರಸ್ತೆ ನಿರ್ಮಾಣವಾಗಲಿದೆ. ಸರ್ಕಾರದ ಹಂತದಲ್ಲಿ ಮಾತುಕತೆ ನಡೆಸಿ ಸ್ಟೀಲ್ ಬ್ರಿಡ್ಜ್‌ಗೂ ಬೇಗ ಅನುದಾನ ದೊರಕಿಸಿಕೊಡುವುದಾಗಿ ಮೇಲಧಿಕಾರಿಗಳು ತಿಳಿಸಿದ್ದಾರೆ’ ಎಂದು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ತಿಮ್ಮರಾಯಪ್ಪ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು