ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದವಿಯಲ್ಲಿ ಕನ್ನಡ ಭಾಷೆ ಕಲಿಕೆ :‘ಎನ್‌ಇಪಿಯಲ್ಲಿ ಭಾಷೆಯ ಕಡ್ಡಾಯ ವಿವರ ಇಲ್ಲ’

ಪದವಿಯಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಪ್ರಕರಣ
Last Updated 8 ಮಾರ್ಚ್ 2022, 15:53 IST
ಅಕ್ಷರ ಗಾತ್ರ

ಬೆಂಗಳೂರು:‘ಸಮಗ್ರ ಶಿಕ್ಷಣ ಪದ್ಧತಿಯು ಸ್ಥಳೀಯ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ನಾಗರಿಕರಿಗೆ ಸುಲಭವಾಗಿ ಎಟಕುವಂತೆ ಮಾಡುವುದೇ2020ರ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಉದ್ದೇಶವಾಗಿದೆ. ಎನ್‌ಇಪಿಯನ್ನು ಸಂವಿಧಾನದ ವಿಶಾಲ ಉದ್ದೇಶಗಳನ್ನು ಇರಿಸಿಕೊಂಡೇ ಪ್ರತಿಷ್ಠಾಪಿಸಲಾಗಿದೆ. ಇದರಲ್ಲಿ, ಯಾವುದೇ ಭಾಷೆಯ ಕಡ್ಡಾಯದ ಬಗ್ಗೆ ವಿವರಿಸಿಲ್ಲ’ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸ್ಪಷ್ಟಪಡಿಸಿದೆ.

ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಡ್ಡಾಯ ಕಲಿಕೆ ಮಾಡಿರುವ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಈ ಪ್ರಮಾಣ ಪತ್ರ ಸಲ್ಲಿಸಿದ್ದು,‘ಎನ್‌ಇಪಿ ಮತ್ತದರ ನಿಬಂಧನೆಗಳಲ್ಲಿ ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಸಂಬಂಧದ ಉಲ್ಲೇಖಗಳಿಲ್ಲ. ಹೀಗಾಗಿ, ಎನ್‌ಇಪಿ ನಿಬಂಧನೆಗಳನ್ನು ಪುನರ್ ವ್ಯಾಖ್ಯಾನಿಸುವ ಅಗತ್ಯ ಉದ್ಭವಿಸುವುದಿಲ್ಲ‘ ಎಂದು ವಿವರಿಸಿದೆ.

ಈ ಕುರಿತಂತೆ ‘ಸಂಸ್ಕೃತ ಭಾರತಿ ಟ್ರಸ್ಟ್‌, ‘ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕರ ಸಂಘ’, ‘ಶ್ರೀ ಹಯಗ್ರೀವ ಟ್ರಸ್ಟ್‌’, ‘ವ್ಯೋಮ ಲಿಂಗ್ವಿಸ್ಟಿಕ್‌ ಲ್ಯಾಬ್ಸ್‌ ಫೌಂಡೇಶನ್‌’ ಹಾಗೂ ಕೆ.ಜಿ. ಶಿವಕುಮಾರ್‌ ಮತ್ತು ಇತರ ಐವರು ವಿದ್ಯಾರ್ಥಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಶಿವಕುಮಾರ್‌ ಮತ್ತು ಇತರರ ಪರ ವಕೀಲ ಶ್ರೀಧರ ಪ್ರಭು, ‘ಸೆಮಿಸ್ಟರ್‌ ಪರೀಕ್ಷೆ ಸಮೀಪಿಸಿರುವುದರಿಂದ ಅರ್ಜಿದಾರ ವಿದ್ಯಾರ್ಥಿಗಳು ಗೊಂದಲದಲ್ಲಿ ಸಿಲುಕದಂತೆ ಆದಷ್ಟು ಶೀಘ್ರ ಅರ್ಜಿ ವಿಲೇವಾರಿ ಮಾಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ,ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಏಪ್ರಿಲ್‌ 4ಕ್ಕೆ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT