ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವರಾಮ ಕಾರಂತರ ಆಪ್ತಸಹಾಯಕಿ ಮಾಲಿನಿ ಮಲ್ಯ ನಿಧನ

Last Updated 29 ಮಾರ್ಚ್ 2023, 7:17 IST
ಅಕ್ಷರ ಗಾತ್ರ

ಬ್ರಹ್ಮಾವರ(ಉಡುಪಿ): ಕಡಲತೀರದ ಭಾರ್ಗವ ಡಾ.ಶಿವರಾಮ ಕಾರಂತರ ಆಪ್ತ ಸಹಾಯಕಿ ಸಾಹಿತಿ, ಮಾಲಿನಿ ಮಲ್ಯ (72) ಅಸೌಖ್ಯದಿಂದ ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಅವಿವಾಹಿತೆಯಾಗಿದ್ದರು.

ಮಾಲಿನಿ ಅವರು ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ವರ್ಷದಿಂದ ಸಮಸ್ಯೆ ಹೆಚ್ಚಿದ ಕಾರಣ ಬೆಂಗಳೂರಿನಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು.

ಆರಂಭದಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ಬೆರಳಚ್ಚುಗಾರರಾಗಿ, ಅನಂತರ ಜೀವ ವಿಮಾ ನಿಗಮದಲ್ಲಿ ಉದ್ಯೋಗಿಯಾಗಿ ಸೇವೆ ಸಲ್ಲಿಸಿದ್ದರು. ಕಾರಂತರ ಆಪ್ತ ಸಹಾಯಕಿಯಾಗಿ ಕಾರ್ಯ ನಿರ್ವಹಿಸಿದ್ದರು.

ಅವರು ‘ನಾನು ಕಂಡ ಕಾರಂತರು ಕೃತಿ‘ ಸೇರಿದಂತೆ 30ಕ್ಕೂ ಹೆಚ್ಚು ಪುಸ್ತಕಗಳು, ಗೊಂದಲಪುರದ ಗಿಂದಲರು, ದಾಂಪತ್ಯಗಾಥೆ ಕಾದಂಬರಿಗಳು, ಹಿಮಾಲಯ ಪ್ರವಾಸಿ ಕಥನ ರಚಿಸಿದ್ದರು.

ಕಾರಂತರ ನಿಧನದ ನಂತರ ಅವರು ವಾಸವಿದ್ದ ಸಾಲಿಗ್ರಾಮದ ಮನೆಯಲ್ಲಿ ಡಾ.ಶಿವರಾಮ ಕಾರಂತ ಪ್ರತಿಷ್ಠಾನವನ್ನು ಸ್ಥಾಪಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT