ಎನ್‌ಇಪಿ ವಿರೋಧಿ ಹೋರಾಟಗಾರರ ಮೇಲೆ ಲಾಠಿ ಪ್ರಹಾರ: ಪರಿಷತ್‌ನಲ್ಲಿ ಖಂಡನೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯರು ಖಂಡಿಸಿದರು.
ಗಮನ ಸೆಳೆಯುವ ಸೂಚನೆ ಮಂಡಿಸಿ ಮಾತನಾಡಿದ ವಿರೋಧ ಪಕ್ಷದ ಮುಖ್ಯ ಸಚೇತಕ ಎಂ. ನಾರಾಯಣಸ್ವಾಮಿ, ‘ರಾಷ್ಟ್ರೀಯ ಶಿಕ್ಷಣ ನೀತಿಯು ಆರ್‌ಎಸ್‌ಎಸ್‌ನ ಗುಪ್ತ ಕಾರ್ಯಸೂಚಿಯ ಭಾಗವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ ದೌರ್ಜನ್ಯ ನಡೆಸಿರುವುದು ಸರಿಯಲ್ಲ. ವಿದ್ಯಾರ್ಥಿಗಳನ್ನು ಮನಬಂದಂತೆ ಥಳಿಸಲಾಗಿದೆ. 25ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎಂದು ದೂರಿದರು.
ವಿದ್ಯಾರ್ಥಿಗಳ ಮೇಲಿನ ಲಾಠಿ ಪ್ರಹಾರ ಕುರಿತು ‘ಪ್ರಜಾವಾಣಿ’ ಬುಧವಾರದ ಸಂಚಿಕೆಯಲ್ಲಿ ಪ್ರಕಟವಾಗಿದ್ದ ವರದಿಯನ್ನು ಪ್ರದರ್ಶಿಸಿದ ಅವರು, ‘ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ಈ ವಿಷಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಗ್ವಾದವೂ ನಡೆಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉತ್ತರ ನೀಡಲಿದ್ದಾರೆ ಎಂದ ವಸತಿ ಸಚಿವ ವಿ. ಸೋಮಣ್ಣ ಎಲ್ಲರನ್ನೂ ಸಮಾಧಾನಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.