ಮಂಗಳವಾರ, ಸೆಪ್ಟೆಂಬರ್ 28, 2021
20 °C

ಹೈಕಮಾಂಡ್‌ನಿಂದ ಇಂದು ರಾತ್ರಿ ಅಥವಾ ನಾಳೆ ಬೆಳಿಗ್ಗೆ ಸಂದೇಶ ಬರಬಹುದು: ಯಡಿಯೂರಪ್ಪ

Published:
Updated:
ರಾಜೀನಾಮೆ ಕೊಡಲು ಸಿದ್ಧ ಎಂದು ಹೇಳುತ್ತಿದ್ದರೂ ಯಡಿಯೂರಪ್ಪನವರ ನಡೆ ಮಾತ್ರ ನಿಗೂಢ. ಪಕ್ಷದ ವರಿಷ್ಠರು ಸೂಚಿಸಿದ್ದಾರೆ, ಪದಚ್ಯುತಿ ಖಚಿತ ಎಂದು ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಹಾಗಿದ್ದ ಮೇಲೆ, 25ಕ್ಕೆ ಸಂದೇಶ ಬರುತ್ತದೆ ಎಂದು ಬಹಿರಂಗವಾಗಿ ಹೇಳುವ ಅಗತ್ಯ ಏನಿತ್ತು. ಯಾವ ಸಂದೇಶವನ್ನು ರವಾನಿಸಲು ಹೀಗೆ ಹೇಳಿದರು ಎಂಬ ಚರ್ಚೆಯೂ ನಡೆಯುತ್ತಿದೆ.
 • 05:38 pm

  ಹೈಕಮಾಂಡ್‌ನಿಂದ ಇನ್ನೂ ಸಂದೇಶ ಬಂದಿಲ್ಲ: ಬಿಎಸ್‌ವೈ

  ಬೆಂಗಳೂರು: ಬಿಜೆಪಿ ಹೈಕಮಾಂಡ್‌ನಿಂದ ಈವರೆಗೂ ತಮಗೆ ಯಾವುದೇ ಸಂದೇಶ ಬಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು. ಬೆಳಗಾವಿ ಜಿಲ್ಲಾ ಪ್ರವಾಸ ಮುಗಿಸಿ ಭಾನುವಾರ ಸಂಜೆ ಬೆಂಗಳೂರಿಗೆ ಹಿಂದಿರುಗಿದ ಬಳಿಕ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ʼಇವತ್ತು ರಾತ್ರಿ ಅಥವಾ ಸೋಮವಾರ ಬೆಳಿಗ್ಗೆ ಸಂದೇಶ ಬರಬಹುದು. ಸಂದೇಶ ಬಂದ ಬಳಿಕ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವೆ. ಅಧಿಕಾರದಲ್ಲಿ ಮುಂದುವರಿಯಿರಿ ಎಂದರೆ ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಿಸಿಕೊಂಡು ಹೋಗುವೆ. ರಾಜೀನಾಮೆಗೆ ಸೂಚಿಸಿದರೆ ತಕ್ಷಣವೇ ಹುದ್ದೆಯಿಂದ ಕೆಳಗೆ ಇಳಿಯುತ್ತೇನೆʼ ಎಂದರು.

   

  ಇನ್ನೂ 10 ರಿಂದ 15 ವರ್ಷಗಳ ಕಾಲ ಕೆಲಸ ಮಾಡುವ ಶಕ್ತಿ ನನಗಿದೆ ಎಂದ ಯಡಿಯೂರಪ್ಪ

 • 05:23 pm

  ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಉತ್ತಮ ಕೆಲಸ ಮಾಡಿದ್ದಾರೆ– ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ

  ಗೋವಾದಲ್ಲಿ ಕರ್ನಾಟಕ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರು ಉತ್ತಮವಾಗಿ ಕೆಸಲ ಮಾಡಿದ್ದಾರೆ. ಕರ್ನಾಟಕದಲ್ಲಿ ಯಾವುದೇ ರಾಜಕೀಯ ಬಿಕ್ಕಟ್ಟಿಲ್ಲ ಎಂದು ಹೇಳಿದ್ದಾರೆ.

  ಯಡಿಯೂರಪ್ಪ ಉತ್ತಮ ಕೆಲಸ ಮಾಡಿದ್ದಾರೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

 • 05:01 pm

  ಸಿಕ್ಕಿತೇ ಹೈಕಮಾಂಡ್ ಸಂದೇಶ..? ಕಾದು ನೋಡೋಣ ಎಂದ ಸಿಎಂ ಬಿಎಸ್‌ವೈ

  ‘ನಮ್ಮ ಪಕ್ಷದಲ್ಲಿ ನಾನೊಬ್ಬನೇ ನಾಯಕ ಏನಲ್ಲ. ಅನೇಕ ಹಿರಿಯ ನಾಯಕರು ಇದ್ದಾರೆ. ನಾಯಕತ್ವದ ತೀರ್ಮಾನಕ್ಕೆ ಬದ್ಧವಾಗಿ ಕೆಲಸ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲೂ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

  ಸಿಕ್ಕಿತೇ ಹೈಕಮಾಂಡ್ ಸಂದೇಶ..? ಕಾದು ನೋಡೋಣ ಎಂದ ಸಿಎಂ ಬಿಎಸ್‌ವೈ

 • 05:11 pm

  ದೆಹಲಿಯಲ್ಲಿ ಬೀಡು ಬಿಟ್ಟ ಮುರುಗೇಶ ನಿರಾಣಿ; ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆ

  ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ ಆಗಿರುವ ಸಚಿವ‌ ಮುರುಗೇಶ ನಿರಾಣಿ, ಭಾನುವಾರ ಮಧ್ಯಾಹ್ನ ದೆಹಲಿಗೆ ಬಂದಿದ್ದಾರೆ. ಸೋಮವಾರ ಸಂಜೆಯ ವೇಳೆಗೆ ಮುಖ್ಯಮಂತ್ರಿ ‌ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ನೀಡುವ ಸಾಧ್ಯತೆ ಇರುವುದರಿಂದ ಪಕ್ಷದ‌ ಕೆಲವು ವತಿಷ್ಠರನ್ನು ಭೇಟಿ ಮಾಡಲು ನಿರಾಣಿ ಬಂದಿದ್ದಾರೆ ಎಂದು ತಿಳಿದುಬಂದಿದೆ.

  ದೆಹಲಿಯಲ್ಲಿ ಬೀಡು ಬಿಟ್ಟ ಮುರುಗೇಶ ನಿರಾಣಿ; ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆ

 • 05:04 pm

  ಸಿಎಂ ಬದಲಾವಣೆ: ಹೈಕಮಾಂಡ್‌ನಿಂದ ಮಾಹಿತಿ ಬಂದಿಲ್ಲ ಎಂದ ನಳಿನ್ ಕುಮಾರ್ ಕಟೀಲ್

  ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಹೈಕಮಾಂಡ್‌ನಿಂದ ಯಾವುದೇ ಸೂಚನೆಯಾಗಲಿ ಹಾಗೂ ಮಾಹಿತಿಯಾಗಲಿ ಬಂದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಹೇಳಿದರು.

  ಸಿಎಂ ಬದಲಾವಣೆ: ಹೈಕಮಾಂಡ್‌ನಿಂದ ಮಾಹಿತಿ ಬಂದಿಲ್ಲ ಎಂದ ನಳಿನ್ ಕುಮಾರ್ ಕಟೀಲ್

 • 05:02 pm

  ಸಿ.ಎಂ ಬದಲಾವಣೆ; ಬಿಜೆಪಿ ವರಿಷ್ಠರು ಗೊಂದಲ ಮೂಡಿಸುತ್ತಿದ್ದಾರೆ ಎಂದ ಶೆಟ್ಟರ್

  'ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದ ವರಿಷ್ಠರ ನಿರ್ಧಾರದಲ್ಲಿ ಇನ್ನೂ ಗೊಂದಲಗಳಿವೆ. ಆ ಕುರಿತು ಅವರಿಂದ ಈವರೆಗೆ ಯಾವುದೇ ಸ್ಪಷ್ಟ ಸೂಚನೆ ಬಂದಿಲ್ಲ' ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

  ಸಿ.ಎಂ ಬದಲಾವಣೆ; ಬಿಜೆಪಿ ವರಿಷ್ಠರು ಗೊಂದಲ ಮೂಡಿಸುತ್ತಿದ್ದಾರೆ ಎಂದ ಶೆಟ್ಟರ್

 • 05:08 pm

  ಸಿಎಂ ಬಿಎಸ್‌ವೈ ಬೆಂಬಲಿಸಿ ಸಮಾವೇಶ: 500ಕ್ಕೂ ಹೆಚ್ಚು ಮಠಾಧೀಶರು ಹಾಜರು

  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬೆಂಬಲಿಸಿ ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ರಾಜ್ಯದ ವಿವಿಧ ಮಠಾಧೀಶರ ಸಮಾವೇಶ ಆರಂಭವಾಗಿದೆ. ರಾಜ್ಯದ ವಿವಿಧ ಮಠಗಳ 500ಕ್ಕೂ ಹೆಚ್ಚು ಮಠಾಧೀಶರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.