ಐಎಂಎ ಸಕ್ಷಮ ಪ್ರಾಧಿಕಾರಕ್ಕೆ ಕಾನೂನು ಅಧಿಕಾರಿ ನೇಮಕ
ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ವಂಚನೆ ಹಗರಣದಲ್ಲಿ ಠೇವಣಿದಾರರ ಹಿತರಕ್ಷಣೆಗೆ ರಚಿಸಿರುವ ಸಕ್ಷಮ ಪ್ರಾಧಿಕಾರದ ಕಾನೂನು ಅಧಿಕಾರಿಯನ್ನಾಗಿ ಪೊಲೀಸ್ ಇಲಾಖೆಯ ಪ್ರಧಾನ ಕಚೇರಿಯ ಹಿರಿಯ ಕಾನೂನು ಅಧಿಕಾರಿ ಸಿಂಗೆಚಾಂಗದೇವ ಅವರನ್ನು ನೇಮಕ ಮಾಡಿ ಬುಧವಾರ ಆದೇಶ ಹೊರಡಿಸಲಾಗಿದೆ.
ಐಎಂಎಗೆ ಸಂಬಂಧಿಸಿದ ಪ್ರಕರಣಗಳಲ್ಲಿ ವಿಶೇಷ ನ್ಯಾಯಾಲಯದಲ್ಲಿ ಸಕ್ಷಮ ಪ್ರಾಧಿಕಾರದ ಪರವಾಗಿ ಸಿಂಗೆಚಾಂಗದೇವ ವಾದ ಮಂಡಿಸಲಿದ್ದಾರೆ. ಹೈಕೋರ್ಟ್ ಸೂಚನೆಯಂತೆ ಅವರನ್ನು ಸಕ್ಷಮ ಪ್ರಾಧಿಕಾರದ ಕಾನೂನು ಅಧಿಕಾರಿ ಹುದ್ದೆಗೆ ನೇಮಿಸಿ ಅಭಿಯೋಗ ಮತ್ತು ಸರ್ಕಾರ ವ್ಯಾಜ್ಯಗಳ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.