ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾದ ರಾಜ್ಯ ಸರ್ಕಾರ: ಎಚ್‌ಡಿಕೆ ಕಿಡಿ

Last Updated 18 ಆಗಸ್ಟ್ 2020, 8:20 IST
ಅಕ್ಷರ ಗಾತ್ರ

ಬೆಂಗಳೂರು: ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೋವಿಡ್-19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ. ಕವಡೆ ಕಾಸಿಗೆ ಸ್ಥಳೀಯ ಸಂಸ್ಥೆಗಳ ಜಮೀನನ್ನು ಗುತ್ತಿಗೆ ನೀಡಿರುವ ಸರ್ಕಾರ ಮಾರಾಟ ನಿರ್ಧಾರ ಕೈಬಿಟ್ಟು, ಬಾಡಿಗೆ ಹೆಚ್ಚಿಸಲು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನನ್ನು ಮಾರಾಟ ಮಾಡಿದರೆ, ಮುಂದೆ ಸಾರ್ವಜನಿಕ ಅವಶ್ಯಕತೆಗಳಿಗೆ ಸರ್ಕಾರಿ ಜಮೀನು ಇಲ್ಲದಂತಾಗುತ್ತದೆ. ಅಗತ್ಯ ಬಿದ್ದಾಗ ಖಾಸಗಿ ಅವರ ಎದುರು ಅಂಗಲಾಚಬೇಕಾದ ದೈನೇಸಿ ಸ್ಥಿತಿ ನಿರ್ಮಾಣವಾಗುತ್ತದೆ ಎಂದಿದ್ದಾರೆ.

ಬೊಕ್ಕಸ ತುಂಬಿಸಿಕೊಳ್ಳಲು ಬಿಡಿಎ ನಿವೇಶನಗಳನ್ನು ಹರಾಜು ಹಾಕುತ್ತಿರುವ ಸರ್ಕಾರ ಇದೀಗ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ನೀಡಿರುವ ಜಮೀನಿನ ಮೇಲೆ ಕಣ್ಣಿಟ್ಟಿದೆ. ಇಂತಹ ತಾತ್ಕಾಲಿಕ ಉಪಶಮನಗಳಿಂದ ಸರ್ಕಾರ ಶಾಶ್ವತವಾಗಿ ಬೊಕ್ಕಸ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ಸುಮಾರು 5000 ಕೋಟಿ ರೂಪಾಯಿಗಳ ಆದಾಯದ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರ ಇರುವುದನ್ನು ಕಳೆದುಕೊಳ್ಳುವ ಈ ಪ್ರಸ್ತಾವನೆಯನ್ನು ಸಾರಾಸಗಟಾಗಿ ತಿರಸ್ಕರಿಸುವಂತೆ ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT