ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದು: ಆರ್ಥಿಕ ಇಲಾಖೆ

ಬೆಂಗಳೂರು: ಕೋವಿಡ್‌ನಿಂದ ಸೃಷ್ಟಿಯಾಗಿರುವ ಆರ್ಥಿಕ ಬಿಕ್ಕಟ್ಟಿನ ಕಾರಣಕ್ಕೆ 2021ರ ಜನವರಿ 1ರಿಂದ ಡಿಸೆಂಬರ್ 31ರವರೆಗೆ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರಿಗೆ ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.
ಈ ಅವಧಿಯಲ್ಲಿ ನಿವೃತ್ತರಾಗುವ ಅಧಿಕಾರಿಗಳು ಮತ್ತು ನೌಕರರಿಗೆ ರಜೆ ನಗದೀಕರಣ ಸೌಲಭ್ಯ ಇರಲಿದೆ. ಸರ್ಕಾರದ ವಿವಿಧ ಇಲಾಖೆಗಳು, ಸಂಸ್ಥೆಗಳು, ನಿಗಮ, ಮಂಡಳಿಗಳು, ಸರ್ಕಾರದಿಂದ ನೆರವು ಇಲ್ಲವೇ ಅನುದಾನ ಪಡೆಯುವ ಮತ್ತು ಪಡೆಯದಿರುವ ಎಲ್ಲ ಸರ್ಕಾರಿ ಉದ್ದಿಮೆಗಳ ನೌಕರರಿಗೂ ಈ ಸೌಲಭ್ಯ ಇರುವುದಿಲ್ಲ ಎಂದು ಆರ್ಥಿಕ ಇಲಾಖೆ ಹೊರಡಿಸಿದ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.