ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್‌: ನಾಲ್ಕು ಸ್ಥಾನಗಳಿಗೆ ಜೂನ್‌ 13ರಂದು ಚುನಾವಣೆ

Last Updated 12 ಮೇ 2022, 23:15 IST
ಅಕ್ಷರ ಗಾತ್ರ

ಬೆಂಗಳೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ನಾಲ್ವರು ಸದಸ್ಯರ ಅವಧಿ ಜುಲೈ 4ರಂದು ಮುಕ್ತಾಯವಾಗಲಿದ್ದು, ಈ ಸ್ಥಾನಗಳ ಭರ್ತಿಗೆ ಜೂನ್‌ 13ರಂದು ಚುನಾವಣೆ ನಡೆಯಲಿದೆ.

ಈ ಸಂಬಂಧ ಕೇಂದ್ರ ಚುನಾವಣಾ ಆಯೋಗ ಗುರುವಾರ ವೇಳಾಪಟ್ಟಿ ಪ್ರಕಟಿಸಿದೆ.

ಮೇ 19 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, 26ರ ವರೆಗೂ ಅವಕಾಶ ಇರಲಿದೆ. ಮೇ 27 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ 30 ಕೊನೆಯ ದಿನ. ಜೂನ್‌ 13 ರಂದು ಬೆಳಿಗ್ಗೆ 8 ರಿಂದ ಸಂಜೆ 4ರವರೆಗೂ ಮತದಾನ ನಡೆಯಲಿದೆ. ಜೂನ್‌ 15ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT