ಬೆಳಗಾವಿ: ‘ವಾಯವ್ಯ ಶಿಕ್ಷಕರು ಹಾಗೂ ಪದವೀಧರರ ಮತಕ್ಷೇತ್ರದಿಂದ ವಿಧಾನಪರಿಷತ್ ನಡೆಯುವ ಚುನಾವಣೆಯಲ್ಲಿ ಸಜ್ಜನಿಕೆ ಮತ್ತು ಪ್ರಾಮಾಣಿಕತೆಗೆ ಹೆಸರಾದ ಪ್ರಕಾಶ ಹುಕ್ಕೇರಿ ಹಾಗೂ ಸುನೀಲ ಸಂಕ ಅವರಿಗೆ ಟಿಕೆಟ್ ನೀಡಿದ್ದೇವೆ. ಪ್ರಜ್ಞಾವಂತ ಮತದಾರರು ಇದನ್ನು ಗಮನಿಸಿ ಬೆಂಬಲಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೋರಿದರು.

ಚುನಾವಣಾ ಪ್ರಚಾರಾರ್ಥ ಇಲ್ಲಿನ ಮರಾಠಾ ಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

‘ವಿದ್ಯಾವಂತ ಮತದಾರರು ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಗಮನಿಸಬೇಕು. ಹಣವಿಲ್ಲದೆ ಯಾವುದೇ ಕೆಲಸ ಸಿಗುತ್ತಿಲ್ಲ. ಶೇ 40ರಷ್ಟು ಕಮಿಷನ್ ವ್ಯವಹಾರದಲ್ಲಿ ಸರ್ಕಾರ ತೊಡಗಿದೆ. ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದೆ’ ಎಂದು ದೂರಿದರು.

ಹೊರಟ್ಟಿ ಕರೆತಂದರೇಕೆ?
‘ಬಿಜೆಪಿ ಗೆಲ್ಲುವುದಿಲ್ಲ ಎನ್ನುವುದನ್ನು ಅರಿತೇ ಜೆಡಿಎಸ್ನಿಂದ ಬಸವರಾಜ ಹೊರಟ್ಟಿ ಅವರನ್ನು ಕರೆದುಕೊಂಡು ಬಂದಿದ್ದಾರೆ. ಗೆಲ್ಲುವ ಪರಿಸ್ಥಿತಿ ಇದ್ದಿದ್ದರೆ ಅವರ ಪಕ್ಷದವರನ್ನೇ ಕಣಕ್ಕಿಳಿಸಬಹುದಿತ್ತಲ್ಲವೇ?. ಮೈಸೂರಿನಲ್ಲಿ ಹೊಸ ಮುಖಗಳಿಗೆ ಅವಕಾಶ ಕೊಟ್ಟಿದ್ದಾರೆ’ ಎಂದು ವ್ಯಂಗ್ಯವಾಡಿದರು.

‘ವಾಯವ್ಯ ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದಿಂದ ಈ ಹಿಂದೆ ಸದಸ್ಯರಾಗಿದ್ದವರು ಶಿಕ್ಷಕರು ಹಾಗೂ ಪದವೀಧರರ ಧ್ವನಿಯಾಗಿ ಕೆಲಸ ಮಾಡಲಿಲ್ಲ ಎಂಬ ವ್ಯಾಪಕ ದೂರಿದೆ. ಎಷ್ಟೇ ಹಣ ಕೊಟ್ಟರೂ ಬಿಜೆಪಿಯವರಿಗೆ ಮತ ಕೊಡುವುದಿಲ್ಲ ಎಂದು ಬಿಜೆಪಿಯವರೇ ಹೇಳುತ್ತಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಹೀಗಾಗಿ, ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಪಕ್ಷದವರು ಗೆಲ್ಲುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬದಲಾವಣೆಗೆ ನಾಂದಿ ಹಾಡಬೇಕು
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಮಾತನಾಡಿ, ‘ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೊಟ್ಟ ಭರವಸೆಯಂತೆ ನಡೆದುಕೊಂಡಿದಿದ್ದರೆ, ಎಂಟು ವರ್ಷಗಳಲ್ಲಿ 16 ಕೋಟಿ ಉದ್ಯೋಗ ಸೃಷ್ಟಿ ಮಾಡಬೇಕಿತ್ತು. ಆದರೆ, ಉದ್ಯೋಗ ಕಳೆದುಕೊಳ್ಳುವಂತಹ ಪರಿಸ್ಥಿತಿ ನಿರ್ಮಿಸಿದೆ. ಬಿಜೆಪಿ ಸರ್ಕಾರದಲ್ಲಿ ಶಿಕ್ಷಕರು ಹಾಗೂ ಪದವೀಧರರಿಗೆ ಯಾವುದೇ ಅನುಕೂಲ ಆಗಿಲ್ಲ’ ಎಂದು ದೂರಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ‘ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ ನಡೆದ ಚುನಾವಣೆಯಲ್ಲಿ ಅನುಸರಿಸಿದ ತಂತ್ರವನ್ನು ಈಗಲೂ ಅನುಷ್ಠಾನಕ್ಕೆ ತರಬೇಕು’ ಎಂದರು.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ‘ಬುದ್ಧಿವಂತರಾದ ಶಿಕ್ಷಕರಿಗೆ ಬುದ್ಧಿ ಹೇಳಲು ನಾಚಿಕೆ ಹಾಗೂ ಮುಜುಗರ ಆಗುತ್ತದೆ. ನಮ್ಮ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಅವರಿಗೆ ಬಿಜೆಪಿಯವರ ಪ್ರಮಾಣಪತ್ರ ಬೇಕಿಲ್ಲ. ಏಕೆಂದರೆ ಎಲ್ಲ ರೀತಿಯ ಕೆಲಸದ ಮೂಲಕ ತಮ್ಮ ಸಾಮರ್ಥ್ಯವನ್ನು ಅವರು ಈಗಾಗಲೇ ತೋರಿಸಿದ್ದಾರೆ. ಪ್ರಬುದ್ಧ ಮತದಾರರು ಬದಲಾವಣೆಗೆ ನಾಂದಿ ಹಾಡಬೇಕು’ ಎಂದು ಕೋರಿದರು.

ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಮು ಗೊಗವಾಡ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಪರ ಕೆಲಸ ಮಾಡುವುದಾಗಿ ತಿಳಿಸಿ, ಬೆಂಬಲ ಸೂಚಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕರಾದ ಮಹಾಂತೇಶ ಕೌಜಲಗಿ, ಗಣೇಶ ಹುಕ್ಕೇರಿ, ಮುಖಂಡರಾದ ವಿನಯ ಕುಲಕರ್ಣಿ, ಎಸ್.ಜಿ. ನಂಜಯ್ಯಮಠ, ಎಚ್.ವೈ. ಮೇಟಿ, ಶಾಮ ಘಾಟಗೆ, ಎ.ಬಿ. ಪಾಟೀಲ, ಗಜಾನನ ಮಂಗಸೂಳಿ, ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ನಗರ ಘಟಕದ ಅಧ್ಯಕ್ಷ ರಾಜು ಸೇಠ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.