ಮಂಗಳವಾರ, ಡಿಸೆಂಬರ್ 1, 2020
25 °C

ಈಶಾನ್ಯ ಶಿಕ್ಷಕರ ಮತಕ್ಷೇತ್ರ: ಮತಗಳ ಎಣಿಕೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಜ್ಞಾನ ವಿಭಾಗದಲ್ಲಿ ಆರಂಭಗೊಂಡಿದೆ.

ಚುನಾವಣಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ಡಾ. ಎನ್.ವಿ. ಪ್ರಸಾದ್ ಮತ ಎಣಿಕೆ ಪ್ರಕ್ರಿಯೆಯನ್ನು ಪರಿಶೀಲಿಸಿದರು.

ಕಾಂಗ್ರೆಸ್ ನಿಂದ ಶರಣಪ್ಪ ಮಟ್ಟೂರ, ಬಿಜೆಪಿಯಿಂದ ಶಶೀಲ್ ನಮೋಶಿ, ಜೆಡಿಎಸ್ ನಿಂದ ತಿಮ್ಮಯ್ಯ ಪುರ್ಲೆ, ಕನ್ನಡ ಚಳವಳಿ ವಾಟಾಳ್ ಪಕ್ಷದ ಸಂಸ್ಥಾಪಕ ವಾಟಾಳ್‌ ನಾಗರಾಜ್, ಪಕ್ಷೇತರರಾಗಿ ಡಾ.ಚಂದ್ರಕಾಂತ ಸಿಂಗೆ ಕಣದಲ್ಲಿದ್ದಾರೆ. 

21,437 ಮತಗಳ ಎಣಿಕೆ ನಡೆಯಬೇಕಿದ್ದು, ಏಳು ಟೇಬಲ್ ಗಳಲ್ಲಿ ಎಣಿಕೆ ನಡೆಯುತ್ತಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಗುಲಬರ್ಗಾ ‌ವಿ.ವಿ. ಸುತ್ತಲ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು