ಬೆಳಗಾವಿ: ‘ಇತಿಹಾಸ ಹಾಳು ಮಾಡುವ ಪಕ್ಷದ ವಿರುದ್ಧ ಕನ್ನಡ ಸಂಘಟನೆಗಳು, ಸಾಹಿತಿಗಳು ಹೋರಾಡಬೇಕು. ಸ್ವಾಮೀಜಿ ನಾಯಕತ್ವ ವಹಿಸಬೇಕು. ಎಲ್ಲ ಸಮಾಜದ ಶ್ರೀಗಳಿಗೆ ಮನವಿ ಮಾಡುತ್ತೇನೆ‘ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಲ್ಲಿ ಹೇಳಿದರು.
‘ಇದನ್ನು ಹೀಗೇ ಬಿಟ್ಟರೆ ರಾಜ್ಯಕ್ಕೆ ದೊಡ್ಡ ಕಳಂಕ ಬರುತ್ತದೆ. ಎಲ್ಲರೂ ಒಗ್ಗಟ್ಟಾಗಿ ಬಿಜೆಪಿಯ ವಾಟ್ಸ್‌ಆ್ಯಪ್ ಯೂನಿವರ್ಸಿಟಿಯನ್ನು ಖಂಡಿಸಬೇಕು’ ಎಂದು ಹೇಳಿದರು. ‘ಉರಿಗೌಡ, ನಂಜೇಗೌಡ ಎಂಬ ಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಟಿಪ್ಪು ಸುಲ್ತಾನ್ ಇತಿಹಾಸವನ್ನೇ ತಿರುಚಲು ಹೊರಟವರಿಗೆ ಆದಿಚುಂಚನಗಿರಿ ಮಠದ ಸ್ವಾಮೀಜಿ ಅವರೇ ಬಹಿಷ್ಕರಿಸಬೇಕು’ ಎಂದು ಸೋಮವಾರ ಇಲ್ಲಿ ಆಗ್ರಹಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.