ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ– ಜೆಡಿಎಸ್‌ ಹೊಂದಾಣಿಕೆ ಬಗ್ಗೆ ಮಾಧ್ಯಮ ವ್ಯಾಖ್ಯಾನ ಮಾಡಲಿ: ಡಿಕೆಶಿ

Last Updated 28 ಮಾರ್ಚ್ 2023, 12:38 IST
ಅಕ್ಷರ ಗಾತ್ರ

ಮಂಡ್ಯ: ‘ಬಿಜೆಪಿ– ಜೆಡಿಎಸ್‌ ಹೊಂದಾಣಿಕೆ ಬಗ್ಗೆ ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರೇ ಮಾತನಾಡಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ನಾನು ಮಾತನಾಡಬೇಕಾಗಿಲ್ಲ, ಮಾಧ್ಯಮಗಳೇ ವ್ಯಾಖ್ಯಾನ ಮಾಡಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಂಗಳವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಸಚಿವ ಕೆ.ಸಿ.ನಾರಾಯಣಗೌಡ ಅವರಾಗಲಿ, ಸಿ.ಪಿ.ಯೋಗೇಶ್ವರ್‌ ಆಗಲಿ ನಮ್ಮ ಜೊತೆ ಮಾತನಾಡಿಲ್ಲ. ಯಾರೇ ಪಕ್ಷಕ್ಕೆ ಬಂದರೂ ಸ್ವಾಗತಿಸಲಾಗುವುದು’ ಎಂದರು.

‘ಈ ಬಾರಿ ಜೆಡಿಎಸ್‌ ಅಧಿಕಾರಕ್ಕೆ ಬರುವುದಿಲ್ಲ, ಬಿಜೆಪಿಗೆ ವೋಟು ಹಾಕುವುದು ವ್ಯರ್ಥ. ರಾಜ್ಯದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್‌ ಪಕ್ಷಕ್ಕೆ ಉತ್ತಮ ಅವಕಾಶವಿದೆ. ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಈಗಾಗಲೇ ಅವಕಾಶ ಕೊಟ್ಟಿದ್ದೀರಿ, ನನಗೂ ಒಮ್ಮೆ ಅವಕಾಶ ಕೊಡಿ’ ಎಂದು ಮನವಿ ಮಾಡಿದರು.

‘ಶ್ರೀರಂಗಪಟ್ಟಣಕ್ಕೆ ಬಹಳ ದೊಡ್ಡ ಇತಿಹಾಸವಿದೆ, ಸಿ.ಟಿ.ರವಿ, ಅಶ್ವತ್ಥ ನಾರಾಯಣ ಮುಂತಾದವರು ಇತಿಹಾಸಕ್ಕೆ ಅಪಚಾರ ಮಾಡುವ ಕೆಲಸ ಮಾಡಿದ್ದರು, ಒಕ್ಕಲಿಗ ಸಮುದಾಯಕ್ಕೆ ಕೆಟ್ಟ ಹೆಸರು ತರಲು ಮುಂದಾಗಿದ್ದರು. ಆದರೆ ಅವರ ಪ್ರಯತ್ನ ಸಫಲವಾಗಲಿಲ್ಲ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT