ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಲಿಕಾಪ್ಟರ್ ಪತನ: 'ಸುಪ್ರೀಂ' ನ್ಯಾಯಮೂರ್ತಿಯಿಂದ ತನಿಖೆ ನಡೆಯಲಿ- ಸುಬ್ರಮಣಿಯನ್

Last Updated 8 ಡಿಸೆಂಬರ್ 2021, 14:27 IST
ಅಕ್ಷರ ಗಾತ್ರ

ಉಡುಪಿ: ಸೇನಾ ಹೆಲಿಕಾಪ್ಟರ್ ಪತನ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಸುಪ್ರೀಂಕೋರ್ಟ್‌ ಹಿರಿಯ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದರು.

ಬುಧವಾರ ಕೃಷ್ಣಮಠದಲ್ಲಿ ನಡೆದ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ದೇಶದ ಸುರಕ್ಷತೆಯ ದೃಷ್ಟಿಯಿಂದ ಸೇನಾ ಹೆಲಿಕಾಪ್ಟರ್ ಪತನವಾಗಿರುವುದು ಗಂಭೀರವಾದ ವಿಷಯವಾಗಿದ್ದು, ಘಟನೆಯಿಂದ ಆಘಾತವಾಗಿದೆ ಎಂದರು.

ಹೆಲಿಕಾಪ್ಟರ್ ಪತನ ಪ್ರಕರಣದಲ್ಲಿ ಸಾಮಾನ್ಯ ತನಿಖೆ ನಡೆದರೆ ಪ್ರಯೋಜನವಿಲ್ಲ. ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT