ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ, ‘ಈ ವಿಷಯ ಈಗಾಗಲೇ ನನ್ನ ಗಮನಕ್ಕೂ ಬಂದಿದೆ. ಕಾಸರಗೋಡು ಮತ್ತು ಮಂಜೇಶ್ವರ ಭಾಗದಲ್ಲಿ ಕನ್ನಡಿಗರು ಮತ್ತು ಮಲಯಾಳ ಭಾಷಿಗರು ಪರಸ್ಪರ ಸಹಬಾಳ್ವೆಯಿಂದ ಸಹೋದರರಂತೆ ಬದುಕು ನಿರ್ವಹಿಸುತ್ತಿದ್ದು, ಕನ್ನಡ ಭಾಷೆಯ ಸಾಂಸ್ಕೃತಿಕ, ಐತಿಹಾಸಿಕ ಮಹತ್ವವುಳ್ಳ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವುದು ಸೂಕ್ತವಲ್ಲ ಎಂದು ಕೇರಳದ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು. ಅಲ್ಲದೆ, ಗ್ರಾಮಗಳ ಹೆಸರುಗಳ ಬದಲಾವಣೆ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಪತ್ರ ಬರೆದು ಮನವಿ ಮಾಡಲಾಗುವುದು’ ಎಂದು ಭರವಸೆ ನೀಡಿದರು.