ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಸೋಮಯಾಜಲಹಳ್ಳಿಯಲ್ಲಿ ಗುರುವಾರ ಮನೆಯೊಂದಕ್ಕೆ ಸಿಡಿಲು ಬಡಿದು ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಡಿಲಿನ ಹೊಡೆತಕ್ಕೆ ಮನೆ ನೆಲಸಮವಾಗಿದೆ. ಮನೆಯಲ್ಲಿದ್ದವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ತೀವ್ರ ಸುಟ್ಟ ಗಾಯಗಳಿಂದ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಸಿಡಿಲು ಬಡಿದು ಸಾವು: ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಯಾದಲಡಕು ಗ್ರಾಮದ ಮಹಲಿಂಗಯ್ಯ (46) ಗುರುವಾರ ಮುಂಜಾನೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಮಳೆಗೆ ಮನೆ ಸೋರುತ್ತಿದ್ದ ಕಾರಣ, ಚಾವಣಿ ಮುಚ್ಚಲೆಂದು ಹೊರಬಂದಾಗ ಸಿಡಿಲು ಬಡಿದಿದೆ. ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.