ಬೆಂಗಳೂರು: ‘ರಾಜ್ಯದಾದ್ಯಂತ ಇರುವ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ನಡೆಸುವ ಮೂಲಕ ಅವರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು’ ಎಂದುಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಸರ್ಕಾರಕ್ಕೆ ಆಗ್ರಹಿಸಿದೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ರಾಜ್ಯ ಸಂಚಾಲಕ ಮಲ್ಲು ಕುಂಬಾರ್,‘ಲಿಂಗತ್ವ ಅಲ್ಪಸಂಖ್ಯಾತರ ರಕ್ಷಣೆಗಾಗಿ ರಾಜ್ಯ ಟ್ರಾನ್ಸ್‌ಜೆಂಡರ್ ನೀತಿಯನ್ನು (2017) ಜಾರಿಗೊಳಿಸಲಾಗಿದೆ. ಕಳೆದ ಬಜೆಟ್‌ನಲ್ಲಿ ₹70 ಲಕ್ಷ ಘೋಷಿಸಿ, ಸಮುದಾಯದ ಸಮೀಕ್ಷೆ ನಡೆಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ. ಆದರೆ, ಇಲಾಖೆಈವರೆಗೆ ಸಮೀಕ್ಷೆಗೆ ಮುಂದಾಗಿಲ್ಲ’ ಎಂದು ದೂರಿದರು.

‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿರುವ ತೃತೀಯ ಲಿಂಗಿಗಳ ನೀತಿಯನ್ನು ಸಮಾಜ ಕಲ್ಯಾಣ ಇಲಾಖೆಗೆ ವರ್ಗಾಯಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಿ, ₹100 ಕೋಟಿ ಅನುದಾನ ಘೋಷಿಸಬೇಕು’ ಎಂದು ಒತ್ತಾಯಿಸಿದರು.

ವೇದಿಕೆಯ ಚಾಂದಿನಿ,‘ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆಶೈಕ್ಷಣಿಕ, ರಾಜಕೀಯ ಹಾಗೂ ಎಲ್ಲ ವಸತಿ ಯೋಜನೆಗಳಲ್ಲಿ ಶೇ 5ರಷ್ಟು ಮೀಸಲಾತಿ ಘೋಷಿಸಬೇಕು. ಸಮುದಾಯದ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಲು ಪ್ರಚಾರ ನೀಡಬೇಕು. ಸಮುದಾಯದವರಿಗೆ ದೌರ್ಜನ್ಯ, ಕಿರುಕುಳ ನೀಡುವಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.